ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಹತ್ಯೆ

0
12

ಬೆಂಗಳೂರು-  ಮಾರಕಾಸ್ತ್ರಗಳಿಂದ ಕೊಚ್ಚಿ ದುಷ್ಕರ್ಮಿಗಳು ರೌಡಿಶೀಟರ್ ಬಿಲಾವಟ್ ತಬ್ರೇಜ್ ನನ್ನು ಶನಿವಾರ ರಾತ್ರಿ ಹತ್ಯೆ ಮಾಡಿರುವ ಘಟನೆ ಕೆಜಿ ಹಳ್ಳಿಯ ಬಿಎಂ ಲೇಔಟ್ ನಲ್ಲಿ ನಡೆದಿದೆ.
ಹತ್ಯೆಯಾದ ಬಿಲಾವಟ್ ತಬ್ರೇಜ್, ಕೆಜಿ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ರೌಡಿಶೀಟರ್ ಆಗಿದ್ದು, ಕೊಲೆ, ಕೊಲೆ ಯತ್ನ ಸೇರಿ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದನು.
ಕೆಲ ದಿನಗಳ ಹಿಂದಷ್ಟೇ ಬಿಲಾವಟ್ ತಬ್ರೇಜ್ ಜೈಲಿನಿಂದ ಬಿಡುಗಡೆಗೊಂಡಿದ್ದನು ಎಂದು ತಿಳಿದು ಬಂದಿದೆ.
ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಕೊಲೆಗೈದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಕೆಜಿ ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

loading...