ದೇಶವಿರೋಧಿ ಚಟುವಟಿಕೆ: ಅಂತಾರಾಷ್ಟ್ರೀಯ ಮಟ್ಟದಲ್ಲಿ ಷಡ್ಯಂತ್ರ-ಬಸವರಾಜ ಬೊಮ್ಮಾಯಿ

0
23

ಬೆಂಗಳೂರು:- ದೇಶ ವಿರೋಧಿ ಚಟುವಟಿಕೆ ನಡೆಸಲು ಅಂತಾರಾಷ್ಟ್ರೀಯ ಮಟ್ಟದಲ್ಲಿ ಷಡ್ಯಂತ್ರ ನಡೆಯುತ್ತಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಲೇಜು ವಿದ್ಯಾರ್ಥಿಗಳನ್ನು ದುರುಪಯೋಗಪಡಿಸಿಕೊಂಡು ದೇಶ ವಿರೋಧಿ ಚಟುವಟಿಕೆಯಲ್ಲಿ ತೊಡಗಿಸುವ ಪ್ರಯತ್ನ ನಡೆದಿದೆ. ಈ ಬಗ್ಗೆ ಕಠಿಣ ಕ್ರಮ ಜರಗಿಸಲಾಗುವುದು. ಶಿಕ್ಷಣ ಸಂಸ್ಥೆಗಳಿಗೆ ಈಗಾಗಲೇ ಸೂಚನೆ ನೀಡಿದ್ದು, ಇಂತಹ ದೇಶ ವಿರೋಧಿ ಚಟುವಟಿಕೆ ಕಂಡು ಬಂದರೆ ತಕ್ಷಣ ಪೊಲೀಸ್ ಇಲಾಖೆಗೆ ಮಾಹಿತಿ ನೀಡಲು ಸೂಚಿಸಲಾಗಿದೆ ಎಂದು ಹೇಳಿದರು.
ಸಿಎಎ ವಿರೋಧಿ ಹೋರಾಟದ ವೇಳೆ ಅಮೂಲ್ಯ ಮತ್ತು ಅಮೂಲ್ಯ ಹೇಳಿಕೆಯನ್ನು ವಿರೋಧಿಸಿ ನಡೆದ ಪ್ರತಿಭಟನೆಯ ವೇಳೆ ಅನ್ನಪೂರ್ಣ ಪಾಕಿಸ್ತಾನ ಪರ, ಕಾಶ್ಮೀರ ಮುಕ್ತಿ ಎಂಬ ಹೇಳಿಕೆ ನೀಡಿದ ಬೆನ್ನಲ್ಲೇ ಗೃಹ ಸಚಿವರು ಈ ಹೇಳಿಕೆ ನೀಡಿದ್ದಾರೆ.

loading...