ಒಡಿಶಾದಲ್ಲಿ ಮೊದಲ ಕೊರೋನಾ ಪ್ರಕರಣ ದೃಢ; ಇಟಲಿಯಿಂದ ಮರಳಿದ್ದ ಯುವಕನಿಗೆ ಸೋಂಕು

0
7

ಭುವನೇಶ್ವರ:- ಒಡಿಶಾಕ್ಕೆ ಇತ್ತೀಚೆಗೆ ಇಟಲಿಯಿಂದ ಮರಳಿದ 33 ವರ್ಷದ ಯುವಕನೋರ್ವನಲ್ಲಿ ಕೊರೋನಾ ಸೋಂಕು ಇರುವುದು ದೃಢಪಟ್ಟಿದೆ ಎಂದು ಅಲ್ಲಿನ ಸರ್ಕಾರ ಮಾಹಿತಿ ನೀಡಿದೆ.
ಇಟಲಿಯಲ್ಲಿ ಸಂಶೋಧನಾ ಕೆಲಸದಲ್ಲಿ ತೊಡಗಿದ್ದ ಈ ವ್ಯಕ್ತಿಯನ್ನು ದೆಹಲಿಯಲ್ಲಿಯೇ ಪ್ರತ್ಯೇಕವಾಗಿರಿಸಿ ತಪಾಸಣೆ ನಡೆಸಲಾಗಿತ್ತು. ನಂತರ  ಮಾ. 12ರಂದು ಭುವನೇಶ್ವರಕ್ಕೆ ಮರಳಿದ್ದು, ಕೆಮ್ಮು, ನೆಗಡಿ ಮತ್ತು ಜ್ವರದಂತಹ ಲಕ್ಷಣಗಳು ಕಂಡುಬಂದಿದ್ದರಿಂದ ಕ್ಯಾಪಿಟಲ್ ಆಸ್ಪತ್ರೆಗೆ ದಾಖಲಾಗಿದ್ದನು.
ಈತನ ರಕ್ತ ಮಾದರಿಗಳನ್ನು ಪರಿಶೀಲಿಸಿದಾದ ಕೊರೋನಾ ವೈರಾಣು ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ಸರ್ಕಾರದ ಮುಖ್ಯ ವಕ್ತಾರ ಸುಬ್ರತ್ ಬಾಗ್ಚಿ ಹೇಳಿಕೆ ನೀಡಿದ್ದಾರೆ.
ಆತನ ಸಂಪರ್ಕಕ್ಕೆ ಬಂದವರನ್ನು ಪತ್ತೆಹಚ್ಚಲಾಗುತ್ತಿದ್ದು,  ವ್ಯಕ್ತಿಯ ಕುಟುಂಬ ಸದಸ್ಯರನ್ನು ಪ್ರತ್ಯೇಕವಾಗಿರಿಸಿ ತಪಾಸಣೆ ನಡೆಸಲಾಗುತ್ತಿದೆ ಎಂದು ಸರ್ಕಾರ ತಿಳಿಸಿದೆ.

ಯುವಕನ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

loading...