ರಾಜ್ಯದ ಮತ್ತಿಬ್ಬರಲ್ಲಿ ಕೋವಿಡ್ ಸೋಂಕು ದೃಢ: ಸೋಂಕು ಪೀಡಿತರ ಸಂಖ್ಯೆ 10ಕ್ಕೆ‌ ಏರಿಕೆ

0
5

ಬೆಂಗಳೂರು- ರಾಜ್ಯದಲ್ಲಿ ಮತ್ತೆರಡು #COVID19 ಪ್ರಕರಣಗಳು ದೃಢಪಟ್ಟಿದ್ದು, ಒಟ್ಟಾರೆಯಾಗಿ ಸೋಂಕಿತರ  ಸಂಖ್ಯೆ ಹತ್ತಕ್ಕೇರಿದೆ.

ಇಬ್ಬರಿಗೆ ಸೋಂಕು ತಗುಲಿರುವ ಕುರಿತು ಆರೋಗ್ಯ ಸಚಿವ ಶ್ರೀರಾಮುಲು  ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ.

ಇತ್ತೀಚೆಗೆ  ಇಂಗ್ಲೆಂಡ್ಗೆ ಪ್ರಯಾಣ ಮಾಡಿದ್ದ ಬೆಂಗಳೂರಿನ 20 ವರ್ಷದ ಯುವತಿ ಹಾಗೂ  ಕಲ್ಬುರ್ಗಿಯಲ್ಲಿ ಓರ್ವ ವ್ಯಕ್ತಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು  ತಿಳಿಸಿದ್ದಾರೆ.
ಇಬ್ಬರೂ ಸೋಂಕಿತರನ್ನು ಚಿಕಿತ್ಸೆಗೆ ಒಳಪಡಿಸಲಾಗಿದೆ ಹಾಗೂ ಮನೆಗಳಲ್ಲಿ ಪ್ರತ್ಯೇಕವಾಗಿ ಇರಿಸಿ ನಿಗಾ ವಹಿಸಲಾಗಿದೆ ಎಂದು ಸುಧಾಕರ್ ಮಾಹಿತಿ ನೀಡಿದ್ದಾರೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವ ಬಿ.ಶ್ರೀರಾಮುಲು ಟ್ವೀಟ್ ಮಾಡಿ, ಬೆಂಗಳೂರಿನಲ್ಲಿ ಯು.ಕೆ. ಪ್ರವಾಸದಿಂದ ಹಿಂದಿರುಗಿದ ವ್ಯಕ್ತಿಯೊಬ್ಬರಿಗೆ ಹಾಗೂ ಗುಲ್ಬರ್ಗದಲ್ಲಿ (ಈ ಮೊದಲೇ ಸೋಂಕಿನಿಂದ ಮೃತಪಟ್ಟ ವ್ಯಕ್ತಿಯ  ಸಂಪರ್ಕದಲ್ಲಿದ) 60 ವರ್ಷದ ವ್ಯಕ್ತಿಯೊಬ್ಬರಿಗೆ ಸೋಂಕು ದೃಢಪಟ್ಟಿದೆ ಎಂದು ತಿಳಿಸಿದ್ದಾರೆ.
ಇವರಿಬ್ಬರು ಈಗಾಗಲೇ ಪ್ರತ್ಯೇಕಿಸಲ್ಪಟ್ಟ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದರಿಂದ, ಶೀಘ್ರ ಗುಣಮುಖರಾಗಲಿದ್ದಾರೆ ಎಂದು ವಿಶ್ವಾಸ ಹೊಂದಿದ್ದೇನೆ ಎಂದು ತಿಳಿಸಿದ್ದಾರೆ.
ಕೋವಿಡ್‌-19 ಹಾಗೂ ನೆರೆಯ ಕೇರಳದಲ್ಲಿ ಹಕ್ಕಿಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ, ಕರಾವಳಿ ಜಿಲ್ಲೆಗಳಲ್ಲಿ ತೆಗೆದುಕೊಂಡಿರುವ ಮುಂಜಾಗ್ರತಾ ಕ್ರಮಗಳ ಪರಿಶೀಲನೆ ಹಾಗೂ ವಿಭಾಗ ಮಟ್ಟದ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆಯನ್ನು ಇಂದು ಮಂಗಳೂರಿನಲ್ಲಿ ನಡೆಸಲಿದ್ದೇನೆ ಎಂದು ಶ್ರೀರಾಮುಲು ತಿಳಿಸಿದ್ದಾರೆ.

loading...