ಅಜ್ಮೀರ್‌ನಲ್ಲಿ ಲಾರಿ-ಕಾರು ನಡುವೆ ಡಿಕ್ಕಿ: ಸ್ಥಳದಲ್ಲೇ ಐವರು ಸಾವು

0
6

ಅಜ್ಮೀರ್- ರಾಜಸ್ಥಾನದ ಈ ಜಿಲ್ಲೆಯ ರೂಪನಗರ ಪೊಲೀಸ್ ಠಾಣೆ ಪ್ರದೇಶದಲ್ಲಿ ಟ್ಯಾಕ್ಸಿಯೊಂದು ಲಾರಿಗೆ ಡಿಕ್ಕಿ ಹೊಡೆದು ಅದರಲ್ಲಿ ಪ್ರಯಾಣಿಸುತ್ತಿದ್ದ ಐವರು ಸಾವನ್ನಪ್ಪಿರುವ ಘಟನೆ ಬುಧವಾರ ಬೆಳಿಗ್ಗೆ ನಡೆದಿದೆ.
ನಾಗೌರ್ ಕಡೆಗೆ ಸಾಗುತ್ತಿದ್ದ ಟ್ಯಾಕ್ಸಿ ಅಕ್ರಮವಾಗಿ ಜಲ್ಲಿಕಲ್ಲು ಸಾಗಿಸುತ್ತಿದ್ದ ಡಂಪರ್‌ಗೆ ಡಿಕ್ಕಿ ಹೊಡೆದಿದ್ದು, ಸ್ಥಳದಲ್ಲೇ ಐವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತರನ್ನು ಸಂದೀಪ್ ಪುನಿಯಾ, ಶೌಕೀನ್, ಸುರೇಂದ್ರ ಸಿಂಗ್, ಸಂಜಯ್ ಶರ್ಮಾ ಮತ್ತು ರಾಮಚಂದ್ರ ಎಂದು ಗುರುತಿಸಲಾಗಿದೆ.
ಪೊಲೀಸರು ಸ್ಥಳಕ್ಕೆ ಧಾವಿಸಿ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ರೂಪ್‍ನಗರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕಳುಹಿಸಿದ್ದಾರೆ. ಮೃತಪಟ್ಟವರಲ್ಲಿ ನಾಲ್ವರು ನಾಗೌರ್ ಜಿಲ್ಲೆಯ ರಾಜ್‌ಗಢದವರಾಗಿದ್ದರೆ, ಮತ್ತೋರ್ವರು ಚುರು ಜಿಲ್ಲೆಯವರಾಗಿದ್ದಾರೆ.
ಉಪ ವಿಭಾಗಾಧಿಕಾರಿ, ತಹಶೀಲ್ದಾರ್, ಡಿವೈಎಸ್‍ಪಿ ಮತ್ತು ಇತರ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲಿಸಿದರು. ಪೊಲೀಸರು ಡಂಪರ್ ಅನ್ನು ವಶಪಡಿಸಿಕೊಂಡಿದ್ದಾರೆ.

loading...