ಕಾಶ್ಮೀರ ಹೆದ್ದಾರಿಯಲ್ಲಿ ಹೊಸದಾಗಿ ಭೂಕುಸಿತ: ಮತ್ತೆ ವಾಹನ ಸಂಚಾರ ಸ್ಥಗಿತ

0
1

ಶ್ರೀನಗರ- ಕಾಶ್ಮೀರ ಕಣಿವೆಯನ್ನು ದೇಶದ ಇತರ ಭಾಗಗಳೊಂದಿಗೆ ಸಂಪರ್ಕಿಸುವ ಏಕೈಕ ಸರ್ವಋತು ರಸ್ತೆಯಾದ 270 ಕಿ.ಮೀ ಉದ್ದದ ಶ್ರೀನಗರ-ಜಮ್ಮು ರಾಷ್ಟ್ರೀಯ ಹೆದ್ದಾರಿಯಲ್ಲಿ ಹೊಸದಾಗಿ ಭೂಕುಸಿತಗಳು ಉಂಟಾಗಿ, ಕಲ್ಲ-ಬಂಡೆಗಳು ಜಾರಿದ್ದರಿಂದ ವಾಹನ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.
ಕಳೆದ ಮೂರು ತಿಂಗಳುಗಳಿಂದ ಮುಚ್ಚಲ್ಪಟ್ಟಿದ್ದ ಶ್ರೀನಗರ-ಲೇಹ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಹಿಮ ತೆರವು ಕಾರ್ಯಾಚರಣೆ ದಾಖಲೆಯ ಸಮಯದಲ್ಲಿ ಪೂರ್ಣಗೊಂಡಿದ್ದು, ದುರಸ್ತಿ ಕಾರ್ಯವನ್ನು ಕೈಗೊಳ್ಳಲಾಗಿದೆ. ಸುಮಾರು 10 ರಿಂದ 12 ಅಡಿ ಹಿಮ ಶೇಖರಣೆ ಮತ್ತು ಹಿಮಪಾತದ ಭೀತಿಯಿಂದಾಗಿ ಹೆದ್ದಾರಿಯನ್ನು ಮುಚ್ಚಲಾಗಿತ್ತು.
ಕಳೆದ ಮೂರು ತಿಂಗಳಿನಿಂದ ಹಿಮ ಶೇಖರಣೆಯಿಂದ 86 ಕಿ.ಮೀ ಉದ್ದದ ಮೊಘಲ್ ಮತ್ತು ಅನಂತ್‌ನಾಗ್-ಕಿಶ್ತ್ ವಾರ್ ರಸ್ತೆಗಳು ಮುಚ್ಚಲ್ಪಟ್ಟಿವೆ. ಖಾರ್ಪುರ ಸೇರಿದಂತೆ ರಂಬಾನ್‌ನ ಹಲವು ಸ್ಥಳಗಳಲ್ಲಿ ಹೊಸ ಭೂಕುಸಿತದಿಂದಾಗಿ ಇಂದು ಬೆಳಿಗ್ಗೆ ಮತ್ತೆ ಹೆದ್ದಾರಿಯಲ್ಲಿ ಸಂಚಾರ ಸ್ಥಗಿತಗೊಂಡಿದೆ ಎಂದು ಸಂಚಾರ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಹೆದ್ದಾರಿ ಮುಚ್ಚಿದ್ದರಿಂದ ಪ್ರಯಾಣಿಕರನ್ನು ಸಾಗಿಸುವ ವಾಹನಗಳು ಸೇರಿದಂತೆ ನೂರಾರು ವಾಹನಗಳು ಹೆದ್ದಾರಿಯ ವಿವಿಧ ಸ್ಥಳಗಳಲ್ಲಿ ಸಿಲುಕಿಕೊಂಡಿವೆ.
ಭೂಕುಸಿತದ ಅವಶೇಷಗಳನ್ನು ತೆರವುಗೊಳಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) ಈಗಾಗಲೇ  ಅತ್ಯಾಧುನಿಕ ಯಂತ್ರಗಳಿಂದ ಕಾರ್ಯಾಚರಣೆ ಮುಂದುವರೆಸಿದೆ.

loading...