ಮೆಕ್ಸಿಕೋದಲ್ಲಿ ಕೊರೊನಾ ಸೋಂಕಿಗೆ ಮೊದಲ ಬಲಿ

0
3

ಮೆಕ್ಸಿಕೋ- ಮೆಕ್ಸಿಕೋದಲ್ಲಿ ಕೊರೊನಾ ಸೋಂಕಿಗೆ ಡಯಾಬಿಟಿಸ್ ನಿಂದ ಬಳಲುತ್ತಿದ್ದ 41 ವರ್ಷದ ವ್ಯಕ್ತಿ ಮೃತಪಟ್ಟಿರುವುದಾಗಿ ಅಲ್ಲಿನ ಆರೋಗ್ಯ ಸಚಿವಾಲಯ ದೃಢಪಡಿಸಿದೆ.

ಮೃತ ವ್ಯಕ್ತಿ ವಿದೇಶ ಪ್ರಯಾಣ ಮಾಡಿರಲಿಲ್ಲ, ಅವರು ನಗರದಲ್ಲಿಯೇ ಸೋಂಕಿತ ವ್ಯಕ್ತಿಯೊಂದಿಗೆ ಸಂಪರ್ಕಿತರಾಗಿರಬಹುದಾಗಿದೆ.
“ಇಂದು ಮೆಕ್ಸಿಕೋದಲ್ಲಿ ಓರ್ವ ವ್ಯಕ್ತಿ ಕೋವಿಡ್ 19 ಕ್ಕೆ ಬಲಿಯಾಗಿದ್ದಾರೆ” ಎಂದು ಬುಧವಾರ ತಡರಾತ್ರಿ ಸಚಿವಾಲಯ ಟ್ವೀಟ್ ಮಾಡಿದೆ.
ಆ ವ್ಯಕ್ತಿಯಲ್ಲಿ ಮಾರ್ಚ್ 9 ರಿಂದ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡಿತ್ತು. ಮಾರ್ಚ್ 3 ರಂದು ಸಂಗೀತ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಅವರಲ್ಲಿ ಫ್ಲೂ ಮಾದರಿ ಲಕ್ಷಣಗಳು ಕಾಣಿಸಿಕೊಂಡಿತ್ತು ಎಂದು ಅವರ ಪತ್ನಿ ತಿಳಿಸಿದ್ದಾರೆ.

ಮೆಕ್ಸಿಕೋದಲ್ಲಿ ಈವರೆಗೆ ಕೊರೊನಾ ಸೋಂಕಿನ 118 ಪ್ರಕರಣಗಳು ದೃಢಪಟ್ಟಿವೆ ಎಂದು ಸಚಿವಾಲಯ ತಿಳಿಸಿದೆ.

loading...