9 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆ

0
14

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪ್ರಭಾವ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದು, ಬುಧವಾರ ಮತ್ತೆ 9 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದ್ದು, ಒಟ್ಟಾರೆಯಾಗಿ ಸೋಂಕಿತರ ಸಂಖ್ಯೆ 532ಕ್ಕೆ ಏರಿಕೆಯಾಗಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಕಲಬುರಗಿ ಜಿಲ್ಲೆಯಲ್ಲಿಯೇ ದಿನದಿಂದ ದಿನಕ್ಕೆ ಕೊರೋನಾ ಆರ್ಭಟ ಹೆಚ್ಚಾಗುತ್ತಲೇ ಇದ್ದು, ನಿನ್ನೆಯಷ್ಟೇ ಈ ಜಿಲ್ಲೆಯಲ್ಲಿ 5 ಹೊಸ ಪ್ರಕರಣಗಳು ಬೆಳಕಿಗೆ ಬಂದಿತ್ತು. ಇದೀಗ ಮತ್ತೆ 8 ಪ್ರಕರಣಗಳು ಬೆಳಕಿಗೆ ಬಂದಿವೆ. ಕಲಬುರಗಿ ಜಿಲ್ಲೆಯಲ್ಲಿ ಮೂವರು ಪುರುಷರಲ್ಲಿ ಹಾಗೂ ಐವರು ಮಹಿಳೆಯರಲ್ಲಿ ವೈರಸ್ ದೃಢಪಟ್ಟಿದೆ.

ಇನ್ನು ಮತ್ತೊಂದು ಪ್ರಕರಣ ಬೆಳಗಾವಿಯ ಹುಕ್ಕೇರಿಯಲ್ಲಿ ದಾಖಲಾಗಿದೆ. 12 ವರ್ಷದ ಗಂಡು ಮಗುವಿನಲ್ಲಿ ವೈರಸ್ ದೃಢಪಟ್ಟಿದೆ. ಈ ನಡುವೆ ಗುಣಮುಖರಾಗುತ್ತಿರುವ ಸಂಖ್ಯೆ ಕೂಡ ಏರಿಕೆಯಾಗಿದ್ದು, ಇದೂವರೆಗೂ 215 ಮಂದಿ ಸೋಂಕಿತರು ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆಂದು ಆರೋಗ್ಯ ಸಚಿವರು ಮಾಹಿತಿ ನೀಡಿದ್ದಾರೆ.

loading...