ನೇಣು ಬಿಗಿದು ವ್ಯಕ್ತಿಯೊರ್ವ ಆತ್ಮಹತ್ಯೆ

0
21

ನೇಣು ಬಿಗಿದು ವ್ಯಕ್ತಿಯೊರ್ವ ಆತ್ಮಹತ್ಯೆ

ಕನ್ನಡಮ್ಮ ಸುದ್ದಿ -ಚಿಕ್ಕೋಡಿ :ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಹಗ್ಗದಿಂದ ನೇಣು ಬಿಗಿದುಕೊಂಡು ವ್ಯಕ್ತಿಯೊರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಬೆನಾಡಿ ಗ್ರಾಮದಲ್ಲಿ ನಡೆದಿದೆ.

ಬೆನಾಡಿ ಗ್ರಾಮದ ಜೋತಿರಾಮ ಶಂಕರ ಜನವಾಡೆ (42) ಆತ್ಮಹತ್ಯೆ ‌ಮಾಡಿಕೊಂಡಿರುವ ವ್ಯಕ್ತಿ ಕೆಲ ದಿನಗಳಿಂದ ಖಿನ್ನತೆಗೊಳಗಾಗಿದ್ದರು. ಇದರಿಂದ ಮನನೊಂದ ಶಂಕರ ಮನೆಯಲ್ಲಿ ಯಾರು ಇಲ್ಲದ ಸಂಧರ್ಭದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತು ನಿಪ್ಪಾಣಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

loading...