ಡಿಸಿಎಂ ಲಕ್ಷ್ಮಣ ಸವದಿ ಮುಂದಿನ ಮುಖ್ಯಮಂತ್ರಿ?

0
24

ಡಿಸಿಎಂ ಲಕ್ಷ್ಮಣ ಸವದಿ ಮುಂದಿನ ಮುಖ್ಯಮಂತ್ರಿ?

ಕನ್ನಡಮ್ಮ ಸುದ್ದಿ -ಅಥಣಿ: ರಾಜ್ಯ ಸರಕಾರಕ್ಕೆ ಒಂದು ವರ್ಷ ತುಂಬಿದ ಹಿನ್ನಲೆ ಬಿಜೆಪಿ ವರಷಾಚರಣೆಯಲ್ಲಿದ್ದರೆ ಇತ್ತ ಡಿಸಿಎಂ ಲಕ್ಷ್ಮಣ ಸವದಿ ಮುಂದಿನ ಮುಖ್ಯಮಂತ್ರಿ ಎಂದು ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಪೋಟೋ ಸದ್ಯ ಹರಿದಾಡುತ್ತಿರುವುದು ಚರ್ಚೆಗೆ ಗ್ರಾಸವಾಗಿದೆ .

ರಾಜ್ಯದಲ್ಲಿ ಮುಂದಿನ ಮುಖ್ಯಮಂತ್ರಿ ಆಯ್ಕೆಗೆ ಕ್ಷಣಗಣನೆ ಎಂದು ಪೋಟೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
ಅಥಣಿ ೨೦೧೮ ವಿಧಾನಸಭಾ ಕ್ಷೇತ್ರದಲ್ಲಿ ಲಕ್ಷ್ಮಣ ಸವದಿ ಅಪರಾಜಿತ ಗೊಂಡಿದ್ದರು. ಎಲ್ಲರಿಗೂ ಅಚ್ಚರಿ ಎಂಬಂತೆ ರಾಜ್ಯದ ಉಪಮುಖ್ಯಮಂತ್ರಿ ಎಂದು ಘೋಷಣೆ ಬಳಿಕ ಡಿಸಿಎಂ ಸವದಿ ಸಚಿವ ಸಂಪುಟದಲ್ಲಿ ಸ್ಥಾನ ಗಿಟ್ಟಿಸಿಕೊಡಿದ್ದರು. ಸದ್ಯ ಈ ಪೋಸ್ಟ್ ಅಥಣಿ ಜನರಲ್ಲಿ ಚರ್ಚೆಗೆ ಗ್ರಾಸವಾಗಿದೆ. ರಾಜಕೀಯದಲ್ಲಿ ಯಾವುದು ಅಸಾಧ್ಯವಲ್ಲ ಎಂಬುದನ್ನು ಡಿಸಿಎಂ ಲಕ್ಷ್ಮಣ ಸವದಿ ಈ ಹಿಂದೆ ನಿರೂಪಿಸಿದ್ದಾರೆ.

ಇದರ ಬೆನ್ನಲ್ಲೇ ರಾಜ್ಯಪಾಲ ನಿರ್ದೇಶನದಂತೆ ದೇಹಲಿ ವರಿಷ್ಠರ ಭೇಟಿಗೆ ಸೂಚಿಸಲಾಗಿದೆ ಎಂದು ತಿಳಿದು ಬಂದಿರುವ ಕಾರಣಕ್ಕೆ ಅವರು ಅಭಿಮಾನಿಗಳು ತಾಲೂಕಿನ ಕೆಲವರು ಸವದಿ ಮುಂದಿನ ಮುಖ್ಯಮಂತ್ರಿ ಎಂದು ಪೋಟೋ ಸದ್ದು ಮಾಡುತ್ತಿದೆ. ರಾಜ್ಯರಾಜಕಾರಣದಲ್ಲಿ ಗಪ್ಪಚುಪ್ಪು ವಾಗಿ ಹಲವಾರು ಬೆಳವಣಿಗೆ ನಡೆಯುತ್ತಿದೆ ಎಂಬುವುದು ರಾಜಕೀಯ ವಿಶ್ಲೇಷಣೆಯಾಗಿದೆ .

loading...