ನಳಿನ್ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಒಂದು ವರ್ಷ; ಮುಖ್ಯಮಂತ್ರಿ, ಸಚಿವರಿಂದ ಅಭಿನಂದನೆ

0
14

ಬೆಂಗಳೂರು:- ಪಕ್ಷವನ್ನು ಸಮರ್ಥವಾಗಿ ಮುನ್ನಡೆಸುತ್ತಾ, ಬಿಜೆಪಿ ರಾಜ್ಯಾಧ್ಯಕ್ಷರಾಗಿ ಒಂದು ವರ್ಷ ಯಶಸ್ವಿಯಾಗಿ ಪೂರೈಸಿರುವ ನಳಿನ್ ಕುಮಾರ್ ಕಟೀಲ್ ಅವರಿಗೆ ಅಭಿನಂದನೆಗಳು. ಸಂಘಟನೆಗೆ ಶಕ್ತಿ, ಕಾರ್ಯಕರ್ತರಿಗೆ ಸ್ಫೂರ್ತಿ ತುಂಬಿ, ಪಕ್ಷ ಹಾಗು ಸರ್ಕಾರದ ನಡುವೆ ಸಮನ್ವಯತೆಯಿಂದ ಕೆಲಸ ಮಾಡುತ್ತಿರುವ ನಿಮಗೆ ನನ್ನ ಶುಭಹಾರೈಕೆಗಳು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಕೃಷಿ ಸಚಿವ ಬಿ.ಸಿ.ಪಾಟೀಲ್ ಕೂಡ ಅಭಿನಂದನೆ ಸಲ್ಲಿಸಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆ ವಹಿಸಿಕೊಂಡು ಜವಾಬ್ದಾರಿ ನಿಷ್ಠೆ, ಪ್ರಾಮಾಣಿಕತೆ ಹಾಗೂ ಶ್ರದ್ದೆಯಿಂದ ಒಂದು ವರ್ಷ ಪೂರೈಸಿರುವ ನಳಿನ್ ಕುಮಾರ್ ಕಟೀಲ್ ಅವರಿಗೆ ತುಂಬು ಹೃದಯದ ಅಭಿನಂದನೆಗಳು. ಪಕ್ಷವನ್ನು ತಳಮಟ್ಟದಿಂದ ಸಂಘಟಿಸುತ್ತಿರುವ ನಿಮಗೆ ದೇವರ ಆಶೀರ್ವಾದ ಸದಾ ಹೀಗೆ ಇರಲಿ, ನಿಮ್ಮ ಸಾರರ್ಥ್ಯದಲ್ಲಿ ಪಕ್ಷ ಸಂಘಟನೆ ಮತ್ತಷ್ಟು ಸಂಘಟನೆಗೊಳ್ಳಲಿ ಎಂದು ಶುಭ ಹಾರೈಸುತ್ತೇನೆ ಎಂದು ಪಾಟೀಲ್ ತಿಳಿಸಿದ್ದಾರೆ.

loading...