ಪ್ರಧಾನಿ ಮೋದಿ ಜನ್ಮದಿನ; ಮುಖ್ಯಮಂತ್ರಿ ಯಡಿಯೂರಪ್ಪ, ಸಚಿವರಿಂದ ಶುಭಾಶಯ

0
31

ಬೆಂಗಳೂರು:- ಪ್ರಧಾನಿ ನರೇಂದ್ರ ಮೋದಿ ಜನ್ಮದಿನದ ಪ್ರಯುಕ್ತ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಸಚಿವ ಸಂಪುಟದ ಸದಸ್ಯರು ಶುಭಾಶಯ ಕೋರಿದ್ದಾರೆ.
ಮುಖ್ಯಮಂತ್ರಿ ಯಡಿಯೂರಪ್ಪ ಟ್ವಿಟ್ ಮಾಡಿ, ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಯವರಿಗೆ ಜನ್ಮದಿನದ ಅಭಿಮಾನಪೂರ್ವಕ ಶುಭಕಾಮನೆಗಳು. ಆರೋಗ್ಯಪೂರ್ಣವಾಗಿ ಇನ್ನೂ ಬಹಳ ವರ್ಷಗಳ ಕಾಲ ತಮ್ಮ ರಾಷ್ಟ್ರಸೇವೆ ಹೀಗೆಯೇ ಮುಂದುವರಿಯುವಂತೆ ದೇವರು ಆಶೀರ್ವದಿಸಲಿ ಎಂದು ಹಾರೈಸುತ್ತೇನೆ ಎಂದು ಶುಭ ಕೋರಿದ್ದಾರೆ.
ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಟ್ವಿಟ್ ಮಾಡಿ, ಜನನಿ ಜನ್ಮ ಭೂಮಿಶ್ಚ ಸ್ವರ್ಗಾದಪಿ ಗರಿಯಸಿ” ಎಂಬ ಮಾತುಗಳನ್ನು ಪ್ರತಿಕ್ಷಣ ಜೀವಿಸುತ್ತಿರುವ ನಮ್ಮ ಪ್ರಧಾನಿ ನರೇಂದ್ರಮೋದಿಯವರಿಗಿಂದು 70 ನೆಯ ಜನ್ಮದಿನ. ದೇಶವನ್ನು ನಿರಂತರವಾಗಿ ಅಭಿವೃದ್ಧಿಯ ಕಡೆಗೆ ನಡೆಸುತ್ತಿರುವ ಕರ್ಮಯೋಗಿ ಆತ್ಮನಿರ್ಭರ ಭಾರತದ ರೂವಾರಿ ನಮ್ಮ ಪ್ರಧಾನಿ ನರೇಂದ್ರಮೋದಿಯವರಿಗೆ ಗುರು ದತ್ತಾತ್ರೇಯ ಸ್ವಾಮಿ ಆಯುರಾರೋಗ್ಯ ಐಶ್ವರ್ಯ ಭಾಗ್ಯ ನೀಡಿ ಕರುಣಿಸಲಿ ಎಂದು ನಾವೆಲ್ಲರೂ ಪ್ರಾರ್ಥಿಸೋಣ ಎಂದು ಟ್ವೀಟ್ ಮಾಡಿ ವಿಡಿಯೋವೊಂದನ್ನು ಅಪ್ ಲೋಡ್ ಮಾಡಿದ್ದಾರೆ.
ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ನಮ್ಮ ನೆಚ್ಚಿನ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಜಿ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು ಎಂದು ತಿಳಿಸಿದ್ದಾರೆ.
ಅದೇ ರೀತಿ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ, ಸಚಿವರಾದ ಸುರೇಶ್ ಕುಮಾರ್ ಮತ್ತಿತರ ಸಚಿವರು ಶುಭಾಶಯ ಕೋರಿದ್ದಾರೆ.

loading...