ಶುಕ್ರವಾರ ಕರ್ನಾಟಕ ಬಂದ್ ಇಲ್ಲ, ಕೇವಲ ಹೆದ್ದಾರಿ ಮಾತ್ರ ಬಂದ್

0
15

ಬೆಂಗಳೂರು:- ಶುಕ್ರವಾರ ಕರ್ನಾಟಕ ಬಂದ್ ಇರುವುದಿಲ್ಲ ಆದರೆ , ಹೆದ್ದಾರಿಗಳನ್ನು ಬಂದ್ ಮಾಡಿ ಪ್ರತಿಭಟನೆ ನಡೆಸುವುದಾಗಿ ರೈತ ಮುಖಂಡ ಕರುಬೂರು ಶಾಂತಕುಮಾರ್ ಸ್ಪಷ್ಟನೆ ನೀಡಿದ್ದಾರೆ.
ಕೇಂದ್ರ ಸರ್ಕಾರದ ನಡೆ ವಿರೋಧಿಸಿ ರೈತಪರ ಸಂಘಟನೆಯಿಂದ ಇದೆ 25 ರ ಶುಕ್ರವಾರ ರೈತ ಸಂಘಟನೆಗಳು ಕರ್ನಾಟಕ ಬಂದ್ ಗೆ ಕರೆ ನೀಡಲು ಮುಂದಾಗಿದ್ದವು. ಆದರೆ, ಇದೀಗ ಕೇವಲ ಹೆದ್ದಾರಿಗಳನ್ನು ಬಂದ್ ಮಾಡಿ ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

ಶುಕ್ರವಾರ ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿಗಳನ್ನು ರೈತರು ಬಂದ್ ಮಾಡಲಿರುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ವಾಹನ ಸಂಚಾರಕ್ಕೆ ಅಡಚಣೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

loading...