ಬೆಳಗಾವಿಯಲ್ಲಿ ಕೇಂದ್ರ ಸಚಿವ ಸುರೇಶ ಅಂಗಡಿ ಸ್ಮಾರಕ ನಿರ್ಮಾಣಕ್ಕೆ ಚಿಂತನೆ: ಸಚಿವ ಶೆಟರ್

0
84

ಬೆಳಗಾವಿ
ಬೆಳಗಾವಿಯಲ್ಲಿ ಕೇಂದ್ರ ಸಚಿವ ಸುರೇಶ ಅಂಗಡಿ ಅವರ ಸ್ಮಾರಕ ರಚನೆ ಮಾಡಲು ಇಲ್ಲಿನ ಜನಪ್ರತಿನಿಧಿಗಳು, ಅಭಿಮಾನಿಗಳು ಹಾಗೂ ಕುಟುಂಬಸ್ಥರ ಜತೆಗೆ ಚರ್ಚೆ ಮಾಡಿ ನಿರ್ಧಾರ ಮಾಡಲಾಗುವುದು ಎಂದು ಬೃಹತ್ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ಹೇಳಿದರು.
ಶುಕ್ರವಾರ ಬೆಳಗಾವಿಯಲ್ಲಿ ಕೇಂದ್ರ ಸಚಿವ ಸುರೇಶ ಅಂಗಡಿ ಅವರ ಮೂರನೇ ದಿನದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಸುರೇಶ ಅಂಗಡಿ ಅವರ ಅಂತ್ಯಕ್ರಿಯೆನ್ನು ಬೆಳಗಾವಿಯಲ್ಲಿ ಮಾಡಬೇಕೆಂದು ದೆಹಲಿಯಲ್ಲಿ ಸಾಕಷ್ಟು ಪ್ರಯತ್ನ ಮಾಡಿದೇವು. ಆದರೆ ಕೋವಿಡ್-19 ಮಾರ್ಗಸೂಚಿ ಪ್ರಕಾರ ಇದು ಆಗುವುದಿಲ್ಲ ಎಂದು ದೆಹಲಿ ನಾಯಕರು ಹೇಳಿದರು. ಜನರ ಮನಸ್ಸಲ್ಲಿ ಸುರೇಶ ಅಂಗಡಿ ಅವರ ಸ್ಮಾರಕ ರಚನೆ ಮಾಡಲು ಎಲ್ಲ ಅಭಿಮಾನಿಗಳಲ್ಲಿ ಇದೆ. ಈ ಕುರಿತು ಎಲ್ಲರೊಂದಿಗೆ ಚರ್ಚೆ ಮಾಡಿ ನಿರ್ಧಾರ ಮಾಡಲಾಗುವುದು ಎಂದು ಹೇಳಿದರು.

loading...