ಕೇಂದ್ರದ ಮಾಜಿ ಸಚಿವ, ಬಿಜೆಪಿ ಹಿರಿಯ ನಾಯಕ ಜಸ್ವಂತ್ ಸಿಂಗ್ ನಿಧನ; ಪ್ರಧಾನಿ ಸೇರಿ ಗಣ್ಯರ ಸಂತಾಪ

0
49

ನವದೆಹಲಿ:- ಕೇಂದ್ರದ ಮಾಜಿ ಸಚಿವ, ಬಿಜೆಪಿ ಹಿರಿಯ ನಾಯಕ ಜಸ್ವಂತ್ ಸಿಂಗ್ ಭಾನುವಾರ ಬೆಳಗ್ಗೆ ನಿಧನರಾಗಿದ್ದಾರೆ. ಅವರಿಗೆ 82 ವರ್ಷ ವಯಸ್ಸಾಗಿತ್ತು.
ಅಲ್ಪಕಾಲದ ಅನಾರೋಗ್ಯದಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು ಬೆಳಗ್ಗೆ ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ.
ಬಿಜೆಪಿ ಸಂಸ್ಥಾಪಕ ಸದಸ್ಯರಲ್ಲಿ ಒಬ್ಬರಾಗಿದ್ದ ಅವರು ಅಟಲ್ ಬಿಹಾರಿ ವಾಜಪೇಯಿ ಸರ್ಕಾರದಲ್ಲಿ ಅತ್ಯಂತ ಪ್ರಮುಖ ಖಾತೆಗಳನ್ನು ನಿಭಾಯಿಸಿದದರು. 1938 ಜನವರಿ 3ರಂದು ಜನಿಸಿದ್ದ ಅವರು, ಡಾರ್ಜಿಲಿಂಗ್ ಸಂಸತ್ ಕ್ಷೇತ್ರದಿಂದ ಸಂಸತ್ ಸದಸ್ಯರಾಗಿದ್ದಾರೆ ಆಯ್ಕೆಯಾಗಿದ್ದರು. ರಾಜಸ್ಥಾನ ಮೂಲದ ಅವರು 1960ರ ದಶಕದಲ್ಲಿ ಭಾರತೀಯ ಸೇನೆಯಲ್ಲಿ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು. ಖಡಕ್‌ವಾಸ್ಲಾದ ಮೇಯೋ ಕಾಲೇಜ್ ಹಾಗೂ ನ್ಯಾಷನಲ್ ಡಿಫೆನ್ಸ್ ಅಕಾಡೆಮಿಯ ಹಳೆಯ ವಿದ್ಯಾರ್ಥಿಯಾಗಿದ್ದ ಅವರು, ಮೇ 16, 1996ರಿಂದ ಜೂನ್ 1,1996ರ ವರೆಗೆ ಅಸ್ತಿತ್ವದಲ್ಲಿದ್ದ, ಅಟಲ್ ಬಿಹಾರಿ ವಾಜಪೇಯಿ ಅವರ ಅಲ್ಪಕಾಲದ ಸರ್ಕಾರದಲ್ಲಿ ಹಣಕಾಸು ಮಂತ್ರಿಯಾಗಿ ಸೇವೆ ಸಲ್ಲಿಸಿದರು.
ಜಸ್ವಂತ್ ಸಿಂಗ್ ಅವರ ಪುತ್ರ ಮಾನವೇಂದ್ರ 2018ರಲ್ಲಿ ಕಾಂಗ್ರೆಸ್ ಸೇರಿ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು. 2009ರಲ್ಲಿ ಬಿಜೆಪಿ ವಿರುದ್ಧವೇ ಜಸ್ವಂತ್ ಸಿಂಗ್ ಬಹಿರಂಗವಾಗಿ ಆರೋಪ ಮಾಡಿದ್ದರು.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿ, ಅಪಾರ ಅನುಭವ ಹೊಂದಿದ್ದ ಬಿಜೆಪಿ ನಾಯಕ ಜಸ್ವಂತ್ ಸಿಂಗ್ ಮೊದಲು ರಾಷ್ಟ್ರದ ಸೈನಿಕನಾಗಿ ಶ್ರದ್ಧೆಯಿಂದ ಸೇವೆ ಸಲ್ಲಿಸಿದ್ದರು. ನಂತರ ರಾಜಕೀಯದಲ್ಲಿ ಸುದೀರ್ಘ ಕಾಲ ಕೆಲಸ ಮಾಡಿದರು ಎಂದು ಸ್ಮರಿಸಿಕೊಂಡಿದ್ದಾರೆ.
” ಜಸ್ವಂತ್ ಸಿಂಗ್ ಜಿ ಮೊದಲು ರಾಷ್ಟ್ರದ ಸೈನಿಕನಾಗಿ ಶ್ರದ್ಧೆಯಿಂದ ಸೇವೆ ಸಲ್ಲಿಸಿದ್ದರು. ನಂತರ ರಾಜಕೀಯದಲ್ಲಿ ಸುದೀರ್ಘ ಕಾಲ ಕೆಲಸ ಮಾಡಿದರು ಅಟಲ್ ಜಿ ಅವರ ಸರ್ಕಾರದ ಅವಧಿಯಲ್ಲಿ ಅವರು ಪ್ರಮುಖ ಖಾತೆಗಳನ್ನು ನಿರ್ವಹಿಸಿದರು ಮತ್ತು ಹಣಕಾಸು, ರಕ್ಷಣಾ ಮತ್ತು ವಿದೇಶಾಂಗ ವ್ಯವಹಾರಗಳ ಖಾತೆಗಳನ್ನು ನಿರ್ವಹಿಸಿ, ಈ ಕ್ಷೇತ್ರಗಳಲ್ಲಿ ಹೆಜ್ಜೆಗುರುತು ಮೂಡಿಸಿದರು. ಅವರ ನಿಧನ ತೀವ್ರ ದುಃಖ ತಂದಿದೆ ಎಂದು ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ.

loading...