ಕರ್ನಾಟಕ ವೀರಶೈವ ಲಿಂಗಾಯತಅಭಿವೃದ್ಧಿ ನಿಗಮ ಸ್ಥಾಪಿಸಲು ಮುಖ್ಯಮಂತ್ರಿ ಆದೇಶ

0
28

ಬೆಂಗಳೂರು:-ರಾಜ್ಯದಲ್ಲಿ ವೀರಶೈವ ಲಿಂಗಾಯತ ಸಮುದಾಯದ ಜನರು ಹೆಚ್ಚಿನ ಸಂಖ್ಯೆ ಯ ಲ್ಲಿದ್ದು ಇವರಲ್ಲಿ ಆರ್ಥಿಕವಾಗಿ,ಸಾಮಾಜಿಕವಾಗಿ ಹಾಗು ಶೈಕ್ಷಣಿಕವಾಗಿ ಅತ್ಯಂತ ಹಿಂದುಳಿದ ವರಿದ್ದಾರೆ. ಹೀಗಾಗಿ ಸಮಾಜದ ಸರ್ವತೋಮುಖ ಅಭಿವೃದ್ಧಿಗಾಗಿ ವೀರಶೈವ ಲಿಂಗಾಯತ ಅಭಿವೃದ್ದಿ ನಿಗಮವನ್ನು ಸ್ಥಾಪಿಸಲು ಅಗತ್ಯ ಕ್ರಮಗಳನ್ನು ಕೈಗೊಂಡು ತಕ್ಷಣದಿಂದಲೇ ಜಾರಿಗೆ ಬರುವಂತೆ ನಿಗಮ ಆರಂಭಿಸುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಆದೇಶ ನೀಡಿದ್ದಾರೆ.

ಆದರೆ ಆದೇಶದಲ್ಲಿ ನಿಗಮ ಸ್ಥಾಪನೆ,ಅನುದಾನ ಸೇರಿದಂತೆ ಯಾವುದೇ ಮಾಹಿತಿಯನ್ನು ತಿಳಿಸಿಲ್ಲ.ನಾಳೆ ಸಚಿವ ಸಂಪುಟ ಸಭೆ ನಡೆಯಲಿದ್ದು ಅಲ್ಲಿ ಅಂತಿಮ ತೀರ್ಮಾನ ಕೈಗೊಂಡು ಸರ್ಕಾರಿ ಆದೇಶ ಹೊರಡಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

loading...