ದೆಹಲಿಯಲ್ಲಿ ಜೈಶೆ ಉಗ್ರರ ಸೆರೆ, ತಪ್ಪಿದ ಅನಾಹುತ

0
23

ನವದೆಹಲಿ:- ದೆಹಲಿ ಪೊಲೀಸರು ಇಬ್ಬರು ಜೈಶ್-ಎ-ಮೊಹಮ್ಮದ್ ಉಗ್ರರನ್ನು ಬಂಧಿಸಿ ರಾಜಧಾನಿಯಲ್ಲಿ ನಡೆಯಲಿದ್ದ ಭಯೋತ್ಪಾದಕ ದಾಳಿಯನ್ನು ವಿಫಲಗೊಳಿಸಿದ್ದಾರೆ.
ದೆಹಲಿಯ ಸರಾಯ್ ಕೇಲ್ ಖಾನ್ ಪ್ರದೇಶದಲ್ಲಿ ಇಬ್ಬರು ಭಯೋತ್ಪಾದಕರನ್ನು ಅಧಿಕಾರಿಗಳು ಈಗ ಪ್ರಶ್ನೆ ಮಾಡುತ್ತಿದ್ದಾರೆ.
ಜಮ್ಮು ಕಾಶ್ಮೀರ ನಿವಾಸಿಗಳಾದ ಇಬ್ಬರು ಶಂಕಿತ ಉಗ್ರರನ್ನು ಬಂಧಿಸಿ ಅವರಿಂದ ಸ್ವಯಂಚಾಲಿತ ಪಿಸ್ತೂಲ್ ಮತ್ತು ಮದ್ದುಗುಂಡುಗಳನನ್ನು ವಶಪಡಿಕೊಳ್ಳಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.ಇಬ್ಬರು ಜೈಶ್-ಎ-ಮೊಹಮ್ಮದ್ ಭಯೋತ್ಪಾದಕರನ್ನು ಜಮ್ಮು ಮತ್ತು ಕಾಶ್ಮೀರದ ನಿವಾಸಿಗಳು ಎಂದು ಗುರುತಿಸಲಾಗಿದೆ ಎಂದೂ ಪೊಲೀಸರು ತಿಳಿಸಿದ್ದಾರೆ.

loading...