ದೆಹಲಿಯಲ್ಲಿ ಬಿ.ಎಲ್. ಸಂತೋಷ ಭೇಟಿಯಾದ ಸಚಿವ ಜಾರಕಿಹೊಳಿ

0
39

ಬೆಳಗಾವಿ
ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಅವರನ್ನು ಶುಕ್ರವಾರ ಬೆಳಗಾವಿ ಜಿಲ್ಲಾ ಉಸ್ತುವಾರಿ, ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಭೇಟಿಯಾಗಿದ್ದಾರೆ.
ದೆಹಲಿಯ ಬಿ.ಎಲ್ ಸಂತೋಷ್ ಅವರ ನಿವಾಸದಲ್ಲಿ ಭೇಟಿಯಾಗಿ ರಾಜಕೀಯದ ಮಾತುಕತೆ ನಡೆಸಿದ್ದಾರೆ. ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ದೆಹಲಿಗೆ ತೆರಳುವ ಮುನ್ನವೇ ದೆಹಲಿಗೆ ತೆರಳಿದ್ದ ಸಚಿವ ರಮೇಶ್ ಜಾರಕಿಹೊಳಿ, ಶುಕ್ರವಾರ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿದ್ದಾರೆ. ಈ ಸಂದರ್ಭದಲ್ಲಿ ರಾಜ್ಯದಲ್ಲಿ ಸಮ್ಮಿಶ್ರ ಸರಕಾರ ಪತನಗೊಳಿಸಿ ಬಿಜೆಪಿ ಸರಕಾರ ರಚನೆಗೆ ಕಾರಣರಾದ ತಮ್ಮ ಬೆಂಬಲಿಗರಿಗೆ ಸಚಿವ ಸ್ಥಾನ ಕೊಡಿಸಲು ನಿರಂತರ ಪ್ರಯತ್ನ ನಡೆಸಿದ್ದಾರೆ ಎನ್ನಲಾಗುತ್ತಿದೆ.
ಬಿ.ಎಲ್.ಸಂತೋಷ ಭೇಟಿ ಬಳಿಕ ಮಾಧ್ಯಮದರೊಂದಿಗೆ ಮಾತನಾಡಿದ ಸಚಿವ ಜಾರಕಿಹೊಳಿ, ಸಿಎಂ ಬಿ.ಎಸ್.ಯಡಿಯೂರಪ್ಪನವರು ದೆಹಲಿಗೆ ಬರುವ ವಿಚಾರ ನನಗೆ ಗೊತ್ತಿರಲಿಲ್ಲ. ನಾನು ಬಂದ ಬಳಿಕ ಸಿಎಂ ದೆಹಲಿಗೆ ಬಂದಿದ್ದಾರೆ. ಕೇಂದ್ರ ಜಲ ಸಂಪನ್ಮೂಲ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ ರಾಜ್ಯದ ಜಲ ಯೋಜನೆಗಳ ಬಗ್ಗೆ ಚರ್ಚೆಸಿದ್ದೇನೆ. ಆದರೆ ಸಿಎಂ ನಿಗದಿತ ಸಮಯಕ್ಕಿಂತ ಬೇಗ ಬೆಂಗಳೂರಿಗೆ ವಾಪಸ್ ಆಗಿದ್ದರಿಂದ ಅವರನ್ನು ದೆಹಲಿಯಲ್ಲಿ ಭೇಟಿಯಾಗಲು ಸಾಧವಾಗಲಿಲ್ಲ ಎಂದರು.

loading...