ಓದುವ ವಯಸ್ಸಿನಲ್ಲಿ ಗರ್ಭೀಣಿಯರಾದ ಬಾಲಕಿಯರು: ಪತಿಗಳ ವಿರುದ್ದ ಪೋಕ್ಸೋ ಕೇಸ್

0
19

ಬೆಳಗಾವಿ
ಕೋವಿಡ್-19 ಲಾಕ್‌ಡೌನ್ ಸಂದರ್ಭದಲ್ಲಿ ಬಾಲ್ಯ ವಿವಾಹವಾಗಿದ್ದ ಬಾಲಕಿಯರು ಈಗ ಗರ್ಭೀಣಿಯರಾಗಿದ್ದು, ಅದಕ್ಕೆ ಅವರ ಗಂಡAದಿರೇ ಕಾರಣವಾಗಿದ್ದಾರೆ.
ಇಬ್ಬರ ಪತಿಯಂದಿರ ವಿರುದ್ದ ಈಗ ಪೋಕ್ಸೋ ಪ್ರಕರಣದಡಿಯಲ್ಲಿ ಕೇಸ್ ದಾಖಲಾಗಿದೆ. ಬೆಳಗಾವಿಯ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕಣ ದಾಖಲಾಗಿವೆ. ಎರಡು ತಿಂಗಳ ಹಿಂದೆ ನಡೆದ ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಬೆಳಗಾವಿ ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ಇದೇ ಮೊದಲ ಬಾರಿ ಪತಿಯಂದಿರ ವಿರುದ್ದ ಪೋಕ್ಸೋ ಪ್ರಕರಣ ದಾಖಲಾಗಿದೆ. ಗರ್ಭೀಣಿಯಾದ ಇಬ್ಬರು ಬಾಲಕಿಯರು ಹೆರಿಗೆಗೆಂದು ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದ ವೇಳೆ ವಿಚಾರ ಬೆಳಕಿಗೆ ಬಂದಿದೆ.
ಆಧಾರ್ ಕಾರ್ಡ್ನಲ್ಲಿ ನಮೂದಾದ ಜನ್ಮದಿನಾಂಕ ಪರಿಶೀಲನೆ ವೇಳೆ ಪ್ರಕರಣ ಬೆಳಕಿಗೆ ಬಂದಿದೆ. 16 ಹಾಗೂ 17 ವರ್ಷದ ಇಬ್ಬರು ಬಾಲಕಿಯರು ಗರ್ಭೀಣಿಯಾಗಿದ್ದಾರೆ. ಈ ಬಗ್ಗೆ ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿಗೆ ಜಿಲ್ಲಾಸ್ಪತ್ರೆ ಸಿಬ್ಬಂದಿ ಮಾಹಿತಿ ನೀಡಿದ್ದಾರೆ. ತಕ್ಷಣ ಸಂತ್ರಸ್ತ ಬಾಲಕಿಯರ ಭೇಟಿಯಾಗಿ ಅಧಿಕಾರಿಗಳು ಮಾಹಿತಿ ಪಡೆದುಕೊಂಡಿದ್ದಾರೆ.
ಸAತ್ರಸ್ತೆಯರ ಬಳಿ ಮಾಹಿತಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ರವೀಂದ್ರ ರತ್ನಾಕರ ಮಾಹಿತಿ ಪಡೆದುಕೊಂಡಿದ್ದಾರೆ. ಪತಿಯರ ವಿರುದ್ದ ಪೋಕ್ಸೋ ಕಾಯ್ದೆಯಡಿ ದೂರು ನೀಡಿದ್ದಾರೆ. 2020ರ ಏಪ್ರೀನಿಂದ ಡಿಸೆಂಬರ್ ವರೆಗೆ ಒಟ್ಟು ಜಿಲ್ಲೆಯಲ್ಲಿ ಸುಮಾರು 112 ಬಾಲ್ಯ ವಿವಾಹ ಆಗಿರುವ ದೂರುಗಳು ಬಂದಿವೆ. ಈ ಪೈಕಿ ಬೆಳಗಾವಿ ಜಿಲ್ಲೆಯಲ್ಲಿ 108 ಬಾಲ್ಯ ವಿವಾಃವನ್ನು ಅಧಿಕಾರಿಗಳು ತಡೆದಿದ್ದಾರೆ ಎನ್ನುವುದು ಗಮನಾರ್ಹ.
ಬಾಲಕಿಯರ ಕುಟುಂಬಸ್ಥರಿಗೆ ತಿಳಿಹೇಳಿ ವಿದ್ಯಾಭ್ಯಾಸ ಮುಂದುವರೆಸಲು ತಿಳಿಸಲಾಗಿದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ತಿಳಿಸಿದ್ದಾರೆ.

 

loading...