ರಾಜ್ಯ ರಾಜಕೀಯದಲ್ಲಿ ಮತ್ತೊಂದು ಹಸಿ ಬಿಸಿ ಸಿಡಿ ಬಾಂಬ್…!

0
88

 

ಬೆಂಗಳೂರು

ರಾಜ್ಯ ರಾಜಕಾರಣದಲ್ಲಿ ಮತ್ತೊಂದು ಸಿಡಿ ಬಿರುಗಾಳಿ ಎಬ್ಬಿಸಿದೆ. ರಾಸಲೀಲೆ ಸಿಡಿಯಲ್ಲಿ ರಾಜ್ಯ ಜಲಸಂಪನ್ಮೂಲ ಸಚಿವ ರಮೇಶ್‌ ಜಾರಕಿಹೋಳಿ ರಾಸಲೀಲೆ ಸಿಡಿ ಬಯಲಾಗಿದೆ ಎನ್ನುವ ಆರೋಪ ಮಾಡಲಾಗಿದೆ.

ಘಟನೆ ನಡೆದು ತಿಂಗಳಾಗಿದ್ದು, ಅವರ ಪರವಾಗಿ ನಾಗರಿಕ ಹಕ್ಕು ಸಮಿತಿ ಅಧ್ಯಕ್ಷ ದಿನೇಶ್ ಕಲ್ಲಹಳ್ಳ ಪೊಲೀಸ್ ಕಮಿಷನರ್ ಗೆ ದೂರು ನೀಡಿದ್ದಾರೆ.ಬೆಂಗಳೂರು ನಗರ ಪೊಲೀಸ್‌ ಆಯುಕ್ತರಿಗೆ ಸಚಿವರ ರಾಸ ಲೀಲೆಯ ಸಿಡಿ ಸಲ್ಲಿಕೆಯಾಗಿದೆ ಎನ್ನಲಾಗಿದೆ.

ಅತ್ಯಾಚಾರದ ಸಂತ್ರಸ್ಥೆ ದೂರು ನೀಡಿಲ್ಲ. ಅವರಿಗೆ ಬೆದರಿಕೆ ಹಾಕಲಾಗಿದೆ ಎನ್ನಲಾಗಿದೆ. ಸಂತ್ರಸ್ಥೆಗೆ ನ್ಯಾಯ ದೊರಕಿಸಿಕೊಡುವಂತೆ ದಿನೇಶ್‌ ಕಲ್ಲಹಳ್ಳ ಅವರು ದೂರಿನಲ್ಲಿ ತಿಳಿಸಿದ್ದಾರೆನ್ನಲಾಗಿದೆ.

ಅಲ್ಲದೆ ಸಚಿವರ ರಾಸಲೀಲೆ ವಿಡಿಯೋ ಬಗ್ಗೆ ಸಂಪೂರ್ಣ ತನಕಖೆಯಾಗಬೇಕೆಂದು ಆಗ್ರಹಿಸಿರುವ ಇವರು, ಹಲವು ದಾಖಲೆಗಳನ್ನು ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ. ಕೆಪಿಟಿಸಿಎಲ್ ನಲ್ಲಿ ನೌಕರಿ ಕೊಡಿಸುವುದಾಗಿ ಸಂತ್ರಸ್ತೆ ಯುವತಿಗೆ ಅತ್ಯಾಚಾರ ಮಾಡಿದ್ದಾರೆ ಎಂದು ಆರೋಪ‌ ಮಾಡಿದ್ದಾರೆ.

 

loading...