ಬೆಂಕಿ‌ ಹಚ್ಚಿದ್ದ ಟೈಯರ್ ಮೇಲೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ಮಾಜಿ ಸಚಿವ ರಮೇಶ ಅಭಿಮಾನಿ

0
8

ಗೋಕಾಕ

ಮಾಜಿ‌ ಸಚಿವ ರಮೇಶ ಜಾರಕಿಹೊಳಿ ಅವರ ನಕಲಿ ಸಿಡಿ ಪ್ರಕರಣದ ಸಮಗ್ರ ತನಿಖೆ ನಡೆಸಬೇಕೆಂದು ಆಗ್ರಹಿಸಿ ಗೋಕಾಕ ನಗರದಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ರಮೇಶ ಬೆಂಬಲಿಗನೊಬ್ಬನಿಗೆ ಬೆಂಕಿ ತಗುಲಿ ಗಂಭೀರ ಗಾಯವಾದ ಘಟನೆ ಶುಕ್ರವಾರ ನಡೆದಿದೆ.

ಮಾಜಿ ಸಚಿವ ರಮೇಶ ಜಾರಕಿಹೊಳಿ ವಿರುದ್ದ ಷಡ್ಯಂತ್ರ ನಡೆಸಿ ನಕಲಿ ಸಿಡಿ ಬಿಡುಗಡೆ ಮಾಡಲಾಗಿದೆ ಎಂದು ಗೋಕಾಕ ನಗರದಲ್ಲಿ ಸಾವಿರಾರು ಸಂಖ್ಯೆಯಲ್ಲಿ ರಮೇಶ ಬೆಂಬಲಿಗರು ನಗರದ ಪ್ರಮುಖ ರಸ್ತೆಗಳನ್ನು ತಡೆದು ಟೈಯರ್ ಗೆ ಬೆಂಕಿ ಹಚ್ಚಿ ಸಾಮಾಜಿಕ ಕಾರ್ಯಕರ್ತ ದಿನೇಶ ಕಲ್ಲಹಳ್ಳಿ ವಿರುದ್ದ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ ವೇಳೆ ಬೆಂಕಿ ಹಚ್ಚಿದ ಟೈಯರ್ ಮೇಲೆ ಹಾರಿದ ಅಭಿಮಾನಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ತೊಡೆಗೆ ಬೆಂಕಿ ತಗುಲಿದ್ದು ಗಂಭೀರವಾಗಿ ಗಾಯಗೊಂಡಿದ್ದಾನೆ. ಕೂಡಲೇ ಸ್ಥಳದಲ್ಲಿದ್ದ ಪೊಲೀಸರು ಆತನನ್ನು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

loading...