ಶಾಸಕ ಯತ್ನಾಳ ವಿರುದ್ದ ಶಿಸ್ತು ಸಮಿತಿ ಕ್ರಮ ಕೈಗೊಳ್ಳುತ್ತದೆ: ಅರುಣ್ ಸಿಂಗ್

0
9

ಬೆಳಗಾವಿ
ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರನ್ನು ಏಕಾಏಕಿ ಅವರನ್ನು ಉಚ್ಚಾಟನೆ ಮಾಡಲು ಸಾಧ್ಯವಿಲ್ಲ. ಅದಕ್ಕೊಂದು ಶಿಸ್ತು ಸಮಿತಿ ಇರುತ್ತದೆ. ತನಿಖೆ ಮಾಡಿ ಕ್ರಮ ಕೈಗೊಳ್ಳುತ್ತದೆ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿದರು.
ಶುಕ್ರವಾರ ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ರಾಜ್ಯದಲ್ಲಿ ಏ.17 ರ ಬಳಿಕ ಬಿಜೆಪಿಯಲ್ಲಿ ನಾಯಕ ಬದಲಾವಣೆಯಾಗುತ್ತದೆ ಎಂಬ ಶಾಸಕ ಯತ್ನಾಳ ಹೇಳಿಕೆಗೆ ಅಷ್ಟೊಂದು ಮಹತ್ವ ಕೊಡುವ ಅಗತ್ಯ ಇಲ್ಲ. ಈಗಾಗಲೇ ಅವರಿಗೆ ನೋಟಿಸ್ ನೀಡಲಾಗಿದೆ. ಅವರು ಮಾತನಾಡುತ್ತಿರುವ ಹಿಂದೆ ಒಂದು ಉದ್ದೇಶ ಇರಬೇಕು. ಅವರ ಮೇಲೆ ಕ್ರಮ ಜರುಗಿಸುತ್ತೇವೆ ಎಂದರು.
ರಾಜ್ಯದಲ್ಲಿ ನಡೆಯುತ್ತಿರುವ ಉಪಚುನಾವಣೆಯಲ್ಲಿ ಬಿಜೆಪಿ ಜಯಶಾಲಿಯಾಗಲಿದೆ. ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ ಹಿಂದಿನಿಗಿAದಲೂ ಅತಿ ಹೆಚ್ಚು ಅಂತರದಲ್ಲಿ ಬಿಜೆಪಿ ಅಭ್ಯರ್ಥಿ ಗೆಲವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ದಿ.ಸುರೇಶ ಅಂಗಡಿ ಅವರು ಪಕ್ಷ ನೀಡಿದ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿಭಾಯಿಸುತ್ತಿದ್ದರು. ಅಲ್ಲದೆ ಕೇಂದ್ರ ಸಚಿವರಾದ ಬಳಿಕ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ. ಬೆಳಗಾವಿ ಸ್ಮಾರ್ಟ್ ಸಿಟಿ, ಅಮೃತ ಸಿಟಿ ಘೋಷಣೆ ಮಾಡಿಸುವಲ್ಲಿ ಅಂಗಡಿ ಅವರ ಪಾತ್ರ ಪ್ರಮುಖವಾಗಿದೆ ಎಂದರು.
ರಾಜ್ಯದಲ್ಲಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರಕಾರ. ಸಾಕಷ್ಟು ಯೋಜನೆ ಜಾರಿಗೆ ತಂದಿದ್ದಾರೆ. ರೈತರಿಗಾಗಿ ಬಜೆಟ್ ನಲ್ಲಿ ಹಲವಾರು ಯೋಜನೆ ಘೋಷಣೆ ಮಾಡಿದ್ದಾರೆ.
ಕರ್ನಾಟಕದ ರೈಲ್ವೆ ಯೋಜನೆಗಳಿಗೆ 7 ಸಾವಿರ ಕೋಟಿ ಅನುದಾನ ಬಿಡುಗಡೆ ಮಾಡಿದೆ. ಇದರಲ್ಲಿ ರಾಜ್ಯ ಸರಕಾರ 50 ಪ್ರತಿಶತ ಅನುದಾನ ಬಿಡುಗಡೆ ಮಾಡಲಿದೆ. ಈ ಭಾಗದಲ್ಲಿ ನನೆಗುದಿಗೆ ಬಿದ್ದ ರೈಲ್ವೆ ಯೋಜನೆಗಳಿಗೆ ವೇಗವಾಗಿ ಚಾಲನೆ ನೀಡಲಾಗುವುದು ಎಂದರು.
ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಹದ್ದು ಬಸ್ತಿನಲ್ಲಿದೆ. ಕಾಂಗ್ರೆಸ್ ಸರಕಾರದ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಯಡಿಯೂರಪ್ಪ ನೇತೃತ್ವದ ಸರಕಾರ ರಾಜ್ಯದಲ್ಲಿ ಉತ್ತಮ ಆಡಳಿತ ನೀಡುತ್ತಿದೆ ಎಂದು ಹೇಳಿದರು.
ಬಿಜೆಪಿ ದೊಡ್ಡ ಕುಟುಂಬ ಕೆಲವೊಂದು ಸಲ ವೈಮನಸ್ಸು ಬರುವುದು ಸಹಜ. ಅದನ್ನು ಬಗೆ ಹರಿಸುತ್ತೇವೆ. ಸಚಿವ ಕೆ.ಎಸ್.ಈಶ್ವರಪ್ಪ ಅವರು ರಾಜ್ಯ ಪಾಲರಿಗೆ ಪತ್ರ ಬರೆಯಬಾರದಿತ್ತು. ಆದರೆ ಈಶ್ವರಪ್ಪನವರು ಹಾಗೂ ಯಡಿಯೂರಪ್ಪ ನವರು ಒಂದೆ ತಟ್ಟೆಯಲ್ಲಿ ಊಟ ಮಾಡಿದ್ದೇವೆ ಎಂದು ಹೇಳಿದ್ದಾರೆ. ಇದರಲ್ಲಿ ಅಸಮಾಧಾನದ ಮಾತು ಎಲ್ಲಿಂದ ಬರುತ್ತದೆ ಎಂದು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದರು.
ರಾಹುಲ್ ಗಾಂಧಿ ವೈಫಲ್ಯದಿಂದ ಕಾಂಗ್ರೆಸ್ ನಾಯಕರಲ್ಲಿ ವೈಮನಸ್ಸು ಉಂಟಾಗಿದೆ. ಅವರನ್ನು ಯಾವ ಕಾಂಗ್ರೆಸ್ ನಾಯಕರು ನಂಬುತ್ತಿಲ್ಲ. ಹೀಗಾಗಿ ಕಾಂಗ್ರೆಸ್ ದೇಶದಲ್ಲಿ ದಿವಾಳಿಯಾಗುವ ಕಾಲ ಸನ್ನಿಹವಾಗಿದೆ ಎಂದರು.
ಸಚಿವರಾದ ಉಮೇಶ ಕತ್ತಿ, ಶ್ರೀಮಂತ ಪಾಟೀಲ, ಶಂಕರ, ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

loading...