ಕಾಳಸಂತೆಯಲ್ಲಿ ಮಾರಾಟವಾಗುತ್ತಿವೆ ರೆಮ್ಡೆಸಿವಿರ್ ಇಂಜೆಕ್ಷನ್

0
15

ಬೆಳಗಾವಿ
ಕೋವಿಡ್-19 ಸೋಂಕು ವ್ಯಾಪಕವಾಗಿ ಹರಡುತ್ತಿರುವುದರಿಂದ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದೆ. ಜಿಲ್ಲಾಡಳಿತ, ಆರೋಗ್ಯ ಇಲಾಖೆಯ ದಿವ್ಯ ನಿರ್ಲಕ್ಷö್ಯದಿಂದ ಸೋಂಕಿತ ರೋಗಿಗಳಿಗೆ ನೀಡಬೇಕಾದ ರೆಮ್ಡೆಸಿವಿರ್ ಇಂಜೆಕ್ಷನ್ ಲಭ್ಯವಿಲ್ಲದ ಕಾರಣ ಸೋಂಕಿತರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.
ರೂಪಾಂತರ ಕೊರೋನಾ ತಡೆಯುವ ನಿಟ್ಟಿನಲ್ಲಿ ಸರಕಾರ ಜಿಲ್ಲಾ ಆಸ್ಪತ್ರೆಗಳಲ್ಲಿ ಉಚಿತವಾಗಿ ಚಿಕಿತ್ಸೆ ನೀಡುತ್ತಿದೆ. ಆದರೆ ಇಲ್ಲಿನ ಕೆಲ ವೈದ್ಯರುಗಳು ಸೋಂಕಿತರ ಜೀವದ ಜತೆಗೆ ಚೆಲ್ಲಾಟವಾಡುತ್ತಿದ್ದಾರೆ. ರೆಮ್ಡೆಸಿವಿರ್ ಇಂಜೆಕ್ಷನ್‌ನ್ನು ಕಾಳ ಸಂತೆಯಲ್ಲಿ ಖರೀದಿ ಮಾಡುತ್ತಿದ್ದಾರೆ. ಸರಿಯಾಗಿ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿಲ್ಲ ಎಂದು ಸೋಂಕಿತರ ಸಂಬAಧಿಗಳು ಆರೋಪಿಸುತ್ತಿದ್ದಾರೆ.
ನೆರೆಯ ಮಹಾರಾಷ್ಟçದಲ್ಲಿ ಕೋವಿಡ್-19 ಸೋಂಕು ಹೆಚ್ಚಳವಾಗುತ್ತಿದ್ದಂತೆ ಮಹಾರಾಷ್ಟç ಸರಕಾರ ಅರ್ಧ ರಾಜ್ಯವನ್ನು ಲಾಕ್‌ಡೌನ್ ಘೋಷಣೆ ಮಾಡಿದೆ. ಅಲ್ಲಿನ ಜನರು ಗಡಿಭಾಗವಾಗಿರುವ ಬೆಳಗಾವಿಗೆ ವಲಸೆ ಬರುತ್ತಿರುವುದರಿಂದ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದೆ. ಜಿಲ್ಲಾಸ್ಪತ್ರೆಯಲ್ಲಿನ ವೈದ್ಯರ ನಿರ್ಲಕ್ಷö್ಯ ಹಾಗೂ ಜಿಲ್ಲಾಡಳಿತ ಬೇಜವಾಬ್ದಾರಿಯಿಂದ ರೆಮ್ಡೆಸಿವಿರ್ ಇಂಜೆಕ್ಷನ್ ಕೊರೋನಾ ಸೋಂಕಿತರಿಗೆ ಸರಿಯಾಗಿ ಸಿಗುತ್ತಿಲ್ಲ. ಕೂಡಲೇ ಜಿಲ್ಲಾಡಳಿತ, ಸರಕಾರ ಎಚ್ಚೆತ್ತುಕೊಂಡು ಕೋವಿಡ್-19 ಸೋಂಕಿತರಿಗೆ ರೆಮ್ಡೆಸಿವಿರ್ ಇಂಜೆಕ್ಷನ್ ಕೊಡಿಸುವ ಕಾರ್ಯಮಾಡಬೇಕೆಂಬುದು ಸಾರ್ವಜನಿಕರ ಆಗ್ರಹವಾಗಿದೆ.

loading...