ಮಾಲ್ ಗಳು ಕೋವಿಡ್-19 ಮಾರ್ಗಸೂಚಿ ಪಾಲನೆ ಮಾಡದವರಿಗೆ ಬಿಸಿ‌ ಮುಟ್ಟಿಸಿದ ಜಿಲ್ಲಾ ಪೊಲೀಸ್ ಇಲಾಖೆ

0
4

ಬೆಳಗಾವಿ
ಜಿಲ್ಲೆಯಲ್ಲಿ‌ ಕೊರೋನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಮಾರ್ಗದರ್ಶನದಲ್ಲಿ ಮುಗಳಖೋಡ ವಾರದ ಸಂತೆಯನ್ನು ಪುರಸಭೆ ಬಾಜು ಇರುವ ಕನ್ನಡ ಸರಕಾರಿ ಶಾಲೆಯ ಆವರಣದಲ್ಲಿ ಸ್ತಳಾಂತರಿಸಲು ಸುಣ್ಣದಿಂದ ಚೌಕಾಕಾರಗಳನ್ನು ಹಾಕಿ ವ್ಯವಸ್ಥೆ ಮಾಡಲಾಗಿದೆ.

ಬೆಳಗಾವಿ ಜಿಲ್ಲೆಗೆ ಮಹಾರಾಷ್ಟ್ರದಿಂದ ಬಂದವರಿಂದ ಸೋಂಕು ಹೆಚ್ಚಳವಾಗುತ್ತಿದ್ದು, ರಾಯಬಾಗ, ಅಥಣಿ, ಗೋಕಾಕ, ಸವದತ್ತಿ, ಮೂಡಲಗಿ ಸೇರಿದಂತೆ ಗ್ರಾಮೀಣ ಪ್ರದೇಶದಲ್ಲಿ ಜನಸಂದಣಿ ಇರುವ ಪ್ರದೇಶದಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ. ಪ್ರಮುಖ ತರಕಾರಿ ಮಾರುಕಟ್ಟೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ನಿಟ್ಟಿ ಜಿಲ್ಲಾ ಪೊಲೀಸ್ ಇಲಾಖೆಯಿಂದಲೇ ಚೌಕಾಕಾರದ ವೃತ್ತವನ್ನು‌ ನಿರ್ಮಿಸಿ ಆಯ್ದ ಕಡೆಯಲ್ಲಿ ವ್ಯಾಪಾರ ವಹಿವಾಟಿಗೆ ಅವಕಾಶ ಮಾಡಿಕೊಡಲಾಗುತ್ತಿದೆ.

ಅಲ್ಲದೆ ಕೊರೋನಾ ನಿಯಂತ್ರಣದ ಸಲುವಾಗಿ ಕೋವಿಡ್-19 ನಿಯಮ ಉಲ್ಲಂಘನೆ ಮಾಡುವ ಸಾರ್ವಜನಿಕರಿಗೆ ದಂಡ ಹಾಗೂ ಮಾಲ್ ಗಳ ವಿರುದ್ದ ಎಫ್ ಐ ಆರ್ ದಾಖಲಿಸಲಾಗುವುದು ಎಂದು ಈಗಾಗಲೇ ಜಿಲ್ಲಾಡಳಿತ ಸೂಚನೆ ನೀಡಿದ್ದು ಇಲ್ಲಿಯವರೆಗೂ ಯಾವುದೇ ಮಾಲ್ ಗಳ ಮೇಲೆ ಕ್ರಮ ಕೈಗೊಂಡಿಲ್ಲ.

loading...