ಕೋವಿಡ್ ಮಾರ್ಗಸೂಚಿ ಪಾಲನೆಗೆ ಮಾರ್ಷಲ್ ಪಡೆ ನಿಯೋಜನೆ

0
3

ಬೆಳಗಾವಿ

ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣಕ್ಕಾಗಿ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಮಾರ್ಷಲ್ ಪಡೆಗಳನ್ನು ನೇಮಿಸಲಾಗಿದೆ.

ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ 121 ಮಾರ್ಷಲ್ ಪಡೆಗಳನ್ನು ನೇಮಿಸಲಾಗಿದೆ ಎಂದು ಜಿಲ್ಲಾ ನಗರಾಭಿವೃದ್ಧಿ ಯೋಜನಾ ನಿರ್ದೇಶಕರಾದ ಈಶ್ವರ ಉಳ್ಳಾಗಡ್ಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಿಲ್ಲಾಧಿಕಾರಿಗಳು ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಕೊವಿಡ್ -19 , ಸಾಂಕ್ರಾಮಿಕ ರೋಗ ತಡೆಗಟ್ಟುವ ಕುರಿತು ದಿನಾಂಕ ಸೋಮವಾರ (ಏ.19) ರಂದು ವಿಡಿಯೋ ಸಂವಾದ ಜರುಗಿಸಿ, ಜಿಲ್ಲೆಯ 33 ನಗರ ಸ್ಥಳೀಯ ಸಂಸ್ಥೆಗಳಲ್ಲಿ 121 ಕೋವಿಡ್ ಮಾರ್ಷಲ್ ಪಡೆಗಳನ್ನು ರಚಿಸಲು ಸೂಚಿಸಿರುತ್ತಾರೆ.

ಅದರಂತೆ 33 ನಗರ ಸ್ಥಳೀಯ ಸಂಸ್ಥೆಗಳಲ್ಲಿ 121 ಕೋವಿಡ್ ಮಾರ್ಷಲ್ ಪಡೆಗಳನ್ನು ರಚಿಸಿದ್ದು, ಕೋವಿಡ್ ಮಾರ್ಷಲ್ ಪಡೆಗಳು ಸಾರ್ವಜನಿಕರು ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಬಗ್ಗೆ ಹಾಗೂ ಮಾಸ್ಕ್ ಧರಿಸದ ಸಾರ್ವಜನಿಕರಿಗೆ ದಂಡ ವಿಧಿಸುವುದರೊಂದಿಗೆ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸುವಂತೆ ಕಾರ್ಯನಿರ್ವಹಿಸಲಿವೆ.

loading...