ಸುಪ್ರೀಂ ಜಡ್ಜ್ಗಳಿಗೆ ಕೊರೊನಾ ಸೋಂಕು

0
19

ನವದೆಹಲಿ:- ಸುಪ್ರೀಂ ಕೋರ್ಟ್‌ನ ನಾಲ್ವರು ನ್ಯಾಯಮೂರ್ತಿಗಳು ಕೊರೊನಾ ಸೋಂಕಿಗೆ ತುತ್ತಾಗಿದ್ದು, ಈ ಪೈಕಿ ಒಬ್ಬರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ನಾಲ್ವರು ನ್ಯಾಯಮೂರ್ತಿಗಳ ಪೈಕಿ ಒಬ್ಬರನ್ನು ದೆಹಲಿಯ ಏಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ನ್ಯಾಯಮೂರ್ತಿಗಳ ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿದೆ ಎಂದು ತಿಳಿದು ಬಂದಿದೆ.ಏಪ್ರಿಲ್‌ 24ರಂದು ನ್ಯಾಯಮೂರ್ತಿ ಎನ್‌ ವಿ ರಮಣ ಅವರು ಸುಪ್ರೀಂ ಕೋರ್ಟ್‌ನ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ಪದಗ್ರಹಣ ಮಾಡಲಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವವರಿಗೆ ಆರ್‌ಟಿ-ಪಿಸಿಆರ್‌ ಪರೀಕ್ಷೆ ಕಡ್ಡಾಯವಾಗಿದೆ. ಕೊವಿಡ್ ನೆಗಟಿವ್ ವರದಿ ಬಂದವರ ಪಟ್ಟಿಯನ್ನು ರಾಷ್ಟ್ರಪತಿ ಭವನಕ್ಕೆ ಕಳಿಸಲಾಗಿದೆ.ಕೋವಿಡ್‌ ಹಿನ್ನೆಲೆಯಲ್ಲಿ ಈಗಾಗಲೇ ನ್ಯಾಯಾಲಯದ ಅನೇಕ ಸಿಬ್ಬಂದಿ ಕ್ವಾರಂಟೈನ್‌ಗೆ ಒಳಗಾಗಿದ್ದಾರೆ. ಹೀಗಾಗಿ ಸಿಬ್ಬಂದಿ ಕೊರತೆ ಎದುರಾಗಿದೆ ಎಂದು ನ್ಯಾಯಮೂರ್ತಿ ಇಂದಿರಾ ಬ್ಯಾನರ್ಜಿ ಅವರು ವಿಚಾರಣೆಯ ಸಂದರ್ಭದಲ್ಲಿ ಹೇಳಿದ್ದಾರೆ.
ಏಪ್ರಿಲ್‌ 22ರಿಂದ ತುರ್ತು ಪ್ರಕರಣಗಳ ವಿಚಾರಣೆಯನ್ನು ಮಾತ್ರ ನಡೆಸಲಾಗುವುದು ಎಂದು ಸುಪ್ರೀಂ ಕೋರ್ಟ್‌ ಈಗಾಗಲೇ ಹೇಳಿದೆ.

loading...