ಮೇ 12 ರವರೆಗೆ ಕೋವಿಡ್ ಮಾರ್ಗಸೂಚಿ ಕಟ್ಟುನಿಟ್ಟಾಗಿ ಪಾಲಿಸಲು ಜಿಲ್ಲಾಧಿಕಾರಿ ಡಾ. ಕೆ. ಹರೀಶ್ ಕುಮಾರ್ ಆದೇಶ

0
19

ಬೆಳಗಾವಿ
ಕೋವಿಡ್ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಕೋವಿಡ್ ರೋಗಾಣು ಹರಡದಂತೆ ತಡೆಗಟ್ಟುವ ನಿಟ್ಟಿನಲ್ಲಿ ಸಾರ್ವಜನಿಕರ ಹಿತದೃಷ್ಟಿಯಿಂದ ಏ.27 ರ ರಾತ್ರಿ 9 ಗಂಟೆಯಿAದ ಮೇ 12 ರ ಬೆಳಿಗ್ಗೆ 6 ಗಂಟೆಯ ವರೆಗೆ ಸರ್ಕಾರದ ಆದೇಶದಡಿಯ ಎಲ್ಲಾ ಮಾರ್ಗಸೂಚಿಗಳನ್ನು ಪಾಲಿಸುವಂತೆ ಜಿಲ್ಲಾ ದಂಡಾಧಿಕಾರಿಗಳಾದ ಡಾ. ಕೆ. ಹರೀಶ್ ಕುಮಾರ ಅವರು ಆದೇಶ ಹೊರಡಿಸಿರುತ್ತಾರೆ.
ಜಿಲ್ಲೆಯಲ್ಲಿ ಕೋವಿಡ್ -19 ಸೋಂಕು ಹರಡುವಿಕೆಯನ್ನು ತಡೆಗಟ್ಟಲು ಮಾರ್ಗಸೂಚಿಗಳನ್ನು ಸಾರ್ವಜನಿಕರು, ವಿವಿಧ ಇಲಾಖೆಗಳ ಮುಖ್ಯಸ್ಥರು, ಖಾಸಗಿ ಸಂಘ, ಸಂಸ್ಥೆಗಳು, ಶಿಸ್ತುಬದ್ಧ ಹಾಗೂ ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಲು ಆದೇಶಿಸಲಾಗಿದೆ.
ಸದರಿ ಅದೇಶದಡಿ ವಿಧಿಸಿದ ಸೂಚನೆಗಳನ್ನು ಪಾಲಿಸದೇ ಇದ್ದಲ್ಲಿ ಅಥವಾ ಯಾವುದೇ ಕ್ರಮಗಳನ್ನು ಅನುಷ್ಠಾನಗೊಳಿಸದೇ ಇದ್ದಲ್ಲಿ ಅವರ ವಿರುದ್ಧ ವಿಪತ್ತು ನಿರ್ವಹಣಾ ಅಧಿನಿಯಮ 2005 ರ ಸೆಕ್ಷನ್ 51 ರಿಂದ 60 ರ ಉಪಬಂಧಗಳು, ಅಲ್ಲದೇ ಭಾರತೀಯ ದಂಡ ಸಂಹಿತೆ ಸೆಕ್ಷನ್ 188 ರಡಿಯಲ್ಲಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ದಂಡಾಧಿಕಾರಿಗಳಾದ ಡಾ. ಕೆ. ಹರೀಶ್ ಕುಮಾರ ಅವರು ತಿಳಿಸಿದ್ದಾರೆ.

loading...