ಒಡಿಶಾದಲ್ಲಿ ಪತ್ರಕರ್ತರು ಮುಂಚೂಣಿ ಕೊವಿಡ್‍ ಸೇನಾನಿಗಳಾಗಿ ಘೋಷಣೆ

0
14

ಭುವನೇಶ್ವರ:- ಮಹತ್ವದ ತೀರ್ಮಾನವೊಂದರಲ್ಲಿ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು ರಾಜ್ಯದ ಕಾರ್ಯನಿರತ ಪತ್ರಕರ್ತರನ್ನು ಮುಂಚೂಣಿ ಕೋವಿಡ್ ಸೇನಾನಿಗಳೆಂದು ಘೋಷಿಸಿದ್ದಾರೆ.
ಈ ನಿಟ್ಟಿನಲ್ಲಿ ಪ್ರಸ್ತಾವನೆಯನ್ನು ಅನುಮೋದಿಸಿರುವ ನವೀನ್‍ ಪಟ್ನಾಯಕ್, ಕಾರ್ಯನಿರತ ಪತ್ರಕರ್ತರು ಅಪಾರ ಸುದ್ದಿಗಳನ್ನು ನೀಡುವ ಮೂಲಕ ರಾಜ್ಯಕ್ಕೆ ಉತ್ತಮ ಸೇವೆ ಸಲ್ಲಿಸುತ್ತಿದ್ದಾರೆ. ಈ ಮೂಲಕ ಬಿಕ್ಕಟ್ಟಿನ ಸಂದರ್ಭದಲ್ಲಿ ಕೋವಿಡ್‌ಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸುತ್ತಿದ್ದಾರೆ. ಕೋವಿಡ್ ವಿರುದ್ಧದ ಸರ್ಕಾರದ ಹೋರಾಟಕ್ಕೆ ಹೆಚ್ಚಿನ ಬೆಂಬಲ ನೀಡುತ್ತಿದ್ದಾರೆ ಎಂದು ಹೇಳಿದ್ದಾರೆ.
ಮುಖ್ಯಮಂತ್ರಿಯವರ ಈ ನಿರ್ಧಾರದಿಂದ ಗೋಪಬಂಧು ಸಾಂಬದಿಕ ಸ್ವಾಸ್ಥ್ಯ ಭೀಮಾ ಯೋಜನೆ ವ್ಯಾಪ್ತಿಗೆ ಬರುವ 6,944 ಕಾರ್ಯನಿರತ ಪತ್ರಕರ್ತರಿಗೆ ಪ್ರಯೋಜನವಾಗಲಿದ್ದು, ತಲಾ 2 ಲಕ್ಷ ರೂ.ಗಳ ಆರೋಗ್ಯ ವಿಮೆ ಸಿಗಲಿದೆ.

loading...