ಜಿಲ್ಲಾಸ್ಪತ್ರೆಗಳ ಸ್ಥಿತಿಗತಿ ಮಾಹಿತಿ ಸಂಗ್ರಹಿಸಿ ವರದಿ ಸಲ್ಲಿಸಲು ಸಿಎಂ ಸೂಚನೆ

0
8

ಬೆಂಗಳೂರು:- ಚಾಮರಾಜನಗರ ಜಿಲ್ಲಾಸ್ಪತ್ರೆ ಸೇರಿದಂತೆ ಜಿಲ್ಲೆಯಲ್ಲಿ ಆಕ್ಸಿಜನ್ ಕೊರತೆಯಿಂದಾಗಿ ಒಂದೇ ದಿನ 22 ಮಂದಿ ಮೃತಪಟ್ಟ ಘಟನೆಯಿಂದ ಎಚ್ಚೆತ್ತುಕೊಂಡಿರುವ ಸರ್ಕಾರ ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಸ್ಪತ್ರೆಗಳಲ್ಲಿ ಕೋವಿಡ್ ಚಿಕಿತ್ಸೆಗೆ ಲಭ್ಯವಿರುವ ಔಷಧಿ ಆಕ್ಸಿಜನ್ ಸೇರಿದಂತೆ ಇತರೆ ಮಾಹಿತಿ ಸಂಗ್ರಹಕ್ಕೆ ಮುಂದಾಗಿದ್ದುವರದಿ ತರಿಸಿಕೊಳ್ಳುವಂತೆ ಅಧಿಕಾರಿಗಳಿಗೆ ಸಿಎಂ ಸೂಚಿಸಿದ್ದಾರೆ.
ಅಧಿಕೃತ ನಿವಾಸ ಕಾವೇರಿಯಲ್ಲಿ ಸರ್ಕಾರದ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ,ಆಕ್ಸಿಜನ್ ತಯಾರಿಕೆ ಮತ್ತು ಪೂರೈಕೆ ಮಾಹಿತಿ ಸಂಬಂಧ ಚರ್ಚೆ ನಡೆಸಿದರು.
ಸಭೆಯಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಕೊರತೆ ನೀಗಿಸಲು ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಬೇಕು.ಚಾಮರಾಜನಗರ ಜಿಲ್ಲೆಯಲ್ಲಿ ನಡೆದಂತಹ ಘಟನೆ ಬೇರೆ ಯಾವುದೇ ಜಿಲ್ಲೆಯಲ್ಲಿ ಮರುಕಳಿಸದಂತೆ ನೋಡಿಕೊಳ್ಳಬೇಕು.ಮೆಡಿಸಿನ್ ಕೊರತೆಯೂ ಎದುರಾಗದಂತೆ ಕ್ರಮ ಕೈಗೊಳ್ಳಬೇಕೆಂದು ಚರ್ಚಿಸಿದರು.
ಜಿಲ್ಲಾ ಆಸ್ಪತ್ರೆಗಳ ಸ್ಥಿತಿ ಗತಿ ಬಗ್ಗೆ ವರದಿ ಸಂಗ್ರಹ ಮಾಡುವಂತೆ ಅಧಿಕಾರಿಗಳಿಗೆ ಸಭೆಯಲ್ಲಿ ಸಿಎಂ ಸೂಚನೆ ನೀಡಿದರು.
ಸಭೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಸೇರಿದಂತೆ ಆರೋಗ್ಯ ಇಲಾಖೆ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.

loading...