ಅಜಿತ್ ಸಿಂಗ್ ನಿಧನ: ಮೋದಿ – ರಾಹುಲ್ ಸಂತಾಪ

0
14

ನವದೆಹಲಿ:- ರಾಷ್ಟ್ರೀಯ ಲೋಕದಳದ ಮುಖ್ಯಸ್ಥ, ಮಾಜಿ ಕೇಂದ್ರ ಸಚಿವ ಚೌಧರಿ ಅಜಿತ್ ಸಿಂಗ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಮತ್ತು ಕಾಂಗ್ರೆಸ್ ಯುವ ನಾಯಕ ರಾಹುಲ್ ಗಾಂಧಿ ತೀವ್ರ ಕಂಬನಿ ಮಿಡಿದಿದ್ದಾರೆ.
ಸಿಂಗ್ ನಿಧನದ ಸುದ್ದಿ ಕೇಳಿ ದುಃಖವಾಗಿದೆ ಅವರ ಕುಟುಂಬದ ಸದಸ್ಯರು ಮತ್ತು ಪ್ರೀತಿಪಾತ್ರರಿಗೆ ನನ್ನ ಸಂತಾಪಗಳು ಎಂದು ಇಬ್ಬರು ನಾಯಕರು ಪ್ರತ್ಯೇಕ ಟ್ವೀಟ್ ಮಾಡಿದ್ದಾರೆ.ಇಂದು ಬೆಳಿಗ್ಗೆ ನಿಧನರಾದ ಅಜಿತ್ ಸಿಂಗ್ ಗುರುಗ್ರಾಮದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಕಳೆದ 22 ರಂದು ಅವರ ಶ್ವಾಸಕೋಶದಲ್ಲಿ ಸೋಂಕು ಹೆಚ್ಚಿದ ಕಾರಣ ಅವರ ಆರೋಗ್ಯ ಸ್ಥಿತಿ ಹದಗೆಟ್ಟಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

loading...