ಮೇ. 10ರಿಂದ 25 ರವರೆಗೆ‌ ರಾಜ್ಯಾದ್ಯಂತ ಲಾಕ್ಡೌನ್ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ:ಸಿಎಂ

0
10

ಬೆಂಗಳೂರು:- ಕೋವಿಡ್‌ ಎರಡನೇ‌ ಅಲೆಯನ್ನು ನಿಯಂತ್ರಿಸಲು ರಾಜ್ಯ ಸರ್ಕಾರ ತಜ್ಞರ ಸಲಹೆ‌ ಮೇರೆಗೆ ಮೇ.10 ರಿಂದ 25 ರವರೆಗೆ ರಾಜ್ಯಾದ್ಯಂತ‌ ಸಂಪೂರ್ಣ ಲಾಕ್ಡೌನ್ ಜಾರಿಮಾಡಿದ್ದು,ಅಗತ್ಯ ವಸ್ತುಗಳ ಖರೀದಿಗೆ ಬೆಳಿಗ್ಗೆ 6ರಿಂದ 10 ರವರೆಗೆ ಅವಕಾಶ ಕಲ್ಪಿಸಿದೆ‌.
ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿ‌ ನಡೆಸಿ ಲಾಕ್ಡೌನ್ ಸಂಬಂಧ ಮಾಹಿತಿ ನೀಡಿದ ಸಿಎಂ,ಕೋವಿಡ್ ನಿಯಂತ್ರಣ ಮಾಡಲು ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲು ತೀರ್ಮಾನ ಕೈಗೊಂಡಿದ್ದೇವೆ . ರಾಜ್ಯದಲ್ಲಿ ಕೋವಿಡ್ ಎರಡನೇ ಅಲೆ ಅತ್ಯಂತ ಪ್ರಬಲವಾಗಿದ್ದು, ತೀವ್ರ ಪರಿಣಾಮಗಳನ್ನು ಬೀರುತ್ತಿದೆ.ಬೆಳಿಗ್ಗೆ ಸುಮಾರು 2 ಗಂಟೆ ಕಾಲ ನಮ್ಮ ಸಚಿವ ಸಂಪುಟದ ಹಿರಿಯ ಸಹೋದ್ಯೋಗಿಗಳ ಜೊತೆಗೆ, ಕೋವಿಡ್ ನಿಯಂತ್ರಣ ಬಾರದ ಈ ಸಂದರ್ಭದಲ್ಲಿ ಯಾವ ರೀತಿಯ ತೀರ್ಮಾನ ಕೈಗೊಳ್ಳಬೇಕು ಎನ್ನುವ ಬಗ್ಗೆ ಚರ್ಚಿಸಲಾಯಿತು. ಈಗ ಅಧಿಕಾರಿಗಳ ಜೊತೆಗೆ ತೀರ್ಮಾನಿಸಿಲಾಗಿದೆ ಎಂದರು.

ರಾಜ್ಯದಲ್ಲಿ ಕೋವಿಡ್ 2ನೇ ಅಲೆ ಅತ್ಯಂತ ಪರಿಣಾಮವಾಗಿದೆ, ಇದನ್ನು ನಿಯಂತ್ರಿಸಲು ವಿಧಿಸಲಾಗಿದ್ದಂತ ಕೊರೋನಾ ಕರ್ಪ್ಯೂ ಹೆಚ್ಚು ಪರಿಣಾಮಕಾರಿ ಆಗಿಲ್ಲ.

ಹೀಗಾಗಿ ಮೇ 10 ರ ಬೆಳಿಗ್ಗೆ 6 ರಿಂದ 25 ರ ಬೆಳಿಗ್ಗೆ 6 ಗಂಟೆಯವರೆಗೆ ರಾಜ್ಯಾದ್ಯಂತ ಸಂಪೂರ್ಣ ಲಾಕ್ಡೌನ್ ಜಾರಿಗೊಳಿಸಿರುವುದಾಗಿ ಹೇಳಿದರು.
ಲಾಕ್ಡೌನ್ ಅವಧಿಯಲ್ಲಿ ಅಂಗಡಿ ಮುಂಗಟ್ಟು ಹೊಟೇಲ್, ಕೈಗಾರಿಕಾ ಚಟುವಟಿಕೆ ನಿಬಂಧಿಸಲಾಗಿದೆ. ಆಹಾರ, ಹಾಲು, ಹಣ್ಣು ಮಾಂಸದ ಅಂಗಡಿ ಮಾರಾಟಕ್ಕೆ ತೊಂದರೆ ಆಗದಂತೆ ಬೆಳಿಗ್ಗೆ 6 ರಿಂದ 10 ರವರೆಗೆ ತೆರೆಯಲು ಅವಕಾಶವಿದೆ.
ತಳ್ಳುಗಾಡಿಯಲ್ಲಿ ತರಕಾರಿ ಮಾರಾಟ ಮಾಡಲು ಅವಕಾಶ ನೀಡಲಾಗಿದೆ. ಆಸ್ಪತ್ರೆ, ವೈದ್ಯಕೀಯ ಚಿಕಿತ್ಸೆ,ಕೃಷಿ ಚಟುವಟಿಕೆ ಸೇರಿದಂತೆ‌ ಅಗತ್ಯ ಸೌಲಭ್ಯ ಅವಕಾಶವಿದೆ.ಸರ್ಕಾರಿ ಕಚೇರಿಗಳು ಭಾಗಶಃ ಕೆಲಸ ಮಾಡಲಿವೆ.
ರಸ್ತೆ ಕಾಮಗಾರಿಗಳಿಗೆ ಯಾವುದೇ ರೀತಿಯ ಅಡ್ಡಿಯಿಲ್ಲ. ಕಟ್ಟಡ ಕಾರ್ಮಿಕರಿಗೆ ಇರುವ ಸ್ಥಳದಲ್ಲಿಯೇ ನೆರವೇರಿಸಲು ಅವಕಾಶ ಕಲ್ಪಿಸಲಾಗಿದೆ.ರೈಲು, ವಿಮಾನ ಸಂಚಾರ ನಿಯಂತ್ರ ರಾಜ್ಯಸರ್ಕಾರದ ಕೈಯಲ್ಲಿ ಇಲ್ಲ.ಹೀಗಾಗಿ ಅವು ಎಂದಿನಂತೆ ಕಾರ್ಯನಿರ್ವಹಿಸಲಿವೆ.
ವಿವಾಹ ಕಾರ್ಯಕ್ರಮದಲ್ಲಿ 50 ಜನ ಮಾತ್ರ ಭಾಗವಹಿಸಲು ಅವಕಾಶ. ಹೆಚ್ಚಿನ ಜನರು ಭಾಗವಹಿಸಿದರೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದರು.
ಲಾಕ್ಡೌನ್ ತಾತ್ಕಾಲಿಕ ಪರಿಹಾರವಾಗಿದ್ದು, ಕಾರ್ಮಿಕರು ಬೆಂಗಳೂರು ಬಿಟ್ಟು ಬೇರೆ ಕಡೆ ಹೋಗಬಾರದು. ಕಟ್ಟಡ ಕಾರ್ಮಿಕರು ಇರುವ ಕಡೆಯಲ್ಲಿಯೇ ಕೆಲಸ ಮಾಡಲು ಅವಕಾಶ ಕಲ್ಪಿಸಲಾಗಿದೆ. ಕಾರ್ಮಿಕರು ಭಯ ಪಡುವ ಅಗತ್ಯವಿಲ್ಲ ಎಂದು ಸಿಎಂ‌ ತಿಳಿಸಿದರು.ಎಲ್ಲಾ ಮಾಹಿತಿಗಳು‌ ನಿಯಮಗಳು ಮಾರ್ಗಸೂಚಿಯಲ್ಲಿ ಪ್ರಕಟವಾಗಲಿದ್ದು,ಎಲ್ಲರೂ ತಪ್ಪದೇ ಇದನ್ನು ಪಾಲಿಸಬೇಕೆಂದರು.

loading...