ಮಂಗಳೂರು ಕರಾವಳಿ ಭಾಗದಲ್ಲಿ ಚಂಡಮಾರುತ ಎಚ್ಚರಿಕೆ

0
9

ಮಂಗಳೂರು:- ಅರಬ್ಬಿ ಸಮುದ್ರದಲ್ಲಿ ವಾಯಭಾರ ಕುಸಿತದಿಂದ ‘ತೌಕ್ಟೇ’ ಹೆಸರಿನ ಚಂಡಮಾರುತ ಸೃಷ್ಟಿಯಾಗುವ ಸಾಧ್ಯತೆ ಇರುವುದರಿಂದ ಮಂಗಳೂರು ಕರಾವಳಿ ಭಾಗದಲ್ಲಿ ಚಂಡಮಾರುತದ ಎಚ್ಚರಿಕೆಯನ್ನು ಕರಾವಳಿ ರಕ್ಷಣಾ ಪಡೆ ನೀಡಿದೆ.
ಸಮುದ್ರಕ್ಕೆ ಇಳಿಯದಂತೆ ಮತ್ತು ಈಗಾಗಲೇ ಸಮುದ್ರಕ್ಕೆ ಹೋಗಿರುವ ಮೀನುಗಾರರು ಹತ್ತಿರದ ಬಂದರುಗಳಿಗೆ ವಾಪಸ್ಸಾಗುವಂತೆ ಕರಾವಳಿ ರಕ್ಷಣಾ ಪಡೆ ಮತ್ತು ನೌಕಾ ಸಿಬ್ಬಂದಿ ಸಾರ್ವಜನಿಕ ಪ್ರಕಟಣೆಯಲ್ಲಿ ಮೀನುಗಾರರಿಗೆ ಮನವಿ ಮಾಡಿದೆ. ಗುರುವಾರ ಮತ್ತು ಶುಕ್ರವಾರ ಚಂಡಮಾರುತ, ಕರಾವಳಿಗೆ ಅಪ್ಪಳಿಸುವ ಸಾಧ್ಯತೆ ಇದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಕರ್ನಾಟಕ, ಕೇರಳ, ತಮಿಳುನಾಡು ಮತ್ತು ಲಕ್ಷದ್ವೀಪದ ಕರಾವಳಿ ಭಾಗಗಳಲ್ಲಿ ಚಂಡಮಾರುತದ ಪ್ರಭಾವದಿಂದ ಈ ತಿಂಗಳ 16ರವರೆಗೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗಾಳಿಯ ವೇಗ ಗಂಟೆಗೆ 40ರಿಂದ 50 ಕಿ.ಮೀ ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

loading...