ಮೇ ಅಂತ್ಯದೊಳಗೆ ವಿದ್ಯಾರ್ಥಿಗಳಿಗೆ ಪೂರ್ಣ ಆಹಾರ ಧಾನ್ಯ ವಿತರಣೆ : ಸಚಿವ ಸುರೇಶ್ ಕುಮಾರ್

0
59

ಬೆಂಗಳೂರು:-ಶಾಲಾ ವಿದ್ಯಾರ್ಥಿಗಳಿಗೆ ನೀಡಬೇಕಾದ ಬಾಕಿ ಉಳಿದಿರುವ ಅಹಾರ ಧಾನ್ಯಗಳ ನ್ನು ಮೇ ತಿಂಗಳ ಅಂತ್ಯದೊಳಗೆ ಪೂರ್ಣವಾಗಿ ವಿತರಿಸಲು ಸೂಚನೆ ನೀಡಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿದ ಬಳಿಕ ಮಾತನಾಡಿದ ಅವರು,ಶಾಲಾ ಮಕ್ಕಳಿ ಗೆ ಮಧ್ಯಾಹ್ನದ ಉಪಹಾರದ ಬದಲಿಗೆ ನೀಡಲಾಗುತ್ತಿದ್ದ ಬಾಕಿ ಉಳಿದಿರುವ ಅಡುಗೆ ಎಣ್ಣೆ ಸೇರಿದಂತೆ ಆಹಾರ ಧಾನ್ಯಗಳನ್ನು ಲಾಕ್-ಡೌನ್ ಅವಧಿ ಮುಗಿದ ತಕ್ಷಣವೇ ವಿತರಿಸಬೇಕೆಂದು ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದರು.
ಈ ಆಹಾರ ಧಾನ್ಯಗಳಿಗೆ ಈಗಾಗಲೇ ಹಣ ಬಿಡುಗಡೆ ಮಾಡಲಾಗಿದೆ.ಪೂರ್ಣ ದಿನಗಳಿಗೆ ವಿತರಣೆ ಮಾಡಲು ಅಗತ್ಯವಿರುವ ಆಹಾರ ಧಾನ್ಯ ಕೆಎಸ್ಎಫ್ ಸಿ ಗೋದಾಮುಗಳಲ್ಲಿ ಏಕ ಕಾಲದಲ್ಲಿ ಸಂಗ್ರಹಣೆ ಮಾಡಿ ಎತ್ತುವಳಿ ಮಾಡಲು ಕಷ್ಟಸಾಧ್ಯವಾಗಿರುವುದರಿಂದ ಎರಡು ಹಂತಗಳಲ್ಲಿ ವಿತರಿಸಲು ತೀರ್ಮಾನಿಸಿ ಈಗಾಗಲೇ ಒಂದು ಹಂತದ ವಿತರಣೆ ಪೂರ್ಣಗೊಳಿಸಲಾಗಿದೆ ಎಂದು ಅವರು ತಿಳಿಸಿದರು.

loading...