ಅನ್ನಪೂರ್ಣ ನಿರ್ವಾಣಿ ಅವರಿಗೆ ಸನ್ಮಾನ

0
37

ಬೆಳಗಾವಿ,22- ಮಹಿಳಾ ಹಾಗೂ ಸಮಾಜಪರ ಕಾರ್ಯನಿರ್ವಹಿಸುತ್ತಿರುವ ಅನ್ನಪೂರ್ಣ ನಿರ್ವಾಣಿ ಅವರಿಗೆ ರಾಜ್ಯ ಸರ್ಕಾರ  ಪ್ರತಿಷ್ಠಿತ ರಾಣಿ ಚನ್ನಮ್ಮ ಪ್ರಶಸ್ತಿ ನೀಡಿ ಗೌರವಿಸಿದೆ. ಪ್ರಶಸ್ತಿ ಪಡೆದ ಅನ್ನಪೂರ್ಣ ಅವರನ್ನು ಇತ್ತೀಚೆಗೆ ನಗರದ ಕುಮಾರ ಗಂಧರ್ವ ರಂಗಮಂದಿರದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಪಂಚಾಯತ ವತಿಯಿಂದ ಆಯೋಜಿಸಿದ್ದ ವಿಶ್ವಮಹಿಳಾ ದಿನಾಚರಣೆಯ ಸಮಾರಂಭದಲ್ಲಿ ಜಿಲ್ಲಾಡಳಿತದ ಪರವಾಗಿ ಗೌರವಿಸಲಾಯಿತು. ಜಿಪಂ. ಅಧ್ಯಕ್ಷ ವೀರಣ್ಣ ಕಡಾಡಿ, ಜಿಪಂ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಡಾ.ಅಜಯ ನಾಗಭೂಷಣ, ರಾಜ್ಯ ಅರಣ್ಯ ಮತ್ತು ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಶಂಕರ ಗೌಡಾ ಪಾಟೀಲ, ಉಮಾ ಸಾಲಿಗೌಡರ ಮೊದಲಾದವರ ಉಪಸ್ಥಿತಿಯಲ್ಲಿ ಅನ್ನಪೂರ್ಣ ನಿರ್ವಾಣಿ ಅವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು. ಅನ್ನಪೂರ್ಣ ಅವರು ಕರ್ನಾಟಕ ಮಾನವ ಹಕ್ಕುಗಳ ಹಿತರಕ್ಷಣಾ ಮಂಡಳಿಯ ಜಿಲ್ಲಾ ಅಧ್ಯಕ್ಷರಾಗಿ, ಬೆಳಗಾವಿ ಜಿಲ್ಲಾ ಪಂಚಾಯತ ಪರಿಷತ್ ಅಧ್ಯಕ್ಷರಾಗಿ ಹಾಗೂ ಜೆಡಿಎಸ್ ಜಿಲ್ಲಾ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

 

loading...

LEAVE A REPLY

Please enter your comment!
Please enter your name here