ಪೊಲೀಸರಿಗೂ ಮಾಹಿತಿ ನೀಡದ ಜಿಲ್ಲಾಸ್ಪತ್ರೆ ಅಧಿಕಾರಿಗಳು

0
32

ಬೆಳಗಾವಿ 31- ಜಿಲ್ಲಾಸ್ಪತ್ರೆಯಲ್ಲಿ ನವಜಾತ ಶಿಶುವಿನ ಅಪಹರಣವಾಗಿ ಎರಡು ವಾರ ಕಳೆದರೂ ಇನ್ನೂವರೆಗೆ ಪ್ರಕರಣವನ್ನು ಭೇದಿಸಿ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ವಿಫಲರಾಗಿದ್ದಾರೆ. ಈ ವೈಫಲ್ಯಕ್ಕೆ ಜಿಲ್ಲಾಸ್ಪತ್ರೆಯ ಅಧಿಕಾರಿಗಳೇ ಕಾರಣವೆಂದು ಸ್ವತಃ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಂದೀಪ ಪಾಟೀಲ ಒಪ್ಪಿಕೊಂಡಿದ್ದಾರೆ. ಜಿಲ್ಲಾಸ್ಪತ್ರೆಯ ಅಧಿಕಾರಿಗಳು ಹಾಗೂ ಸಿಬ್ಬಂದಿವರ್ಗ ಸರಿಯಾದ ಮಾಹಿತಿ ನೀಡದ ಕಾರಣ ಪ್ರಕರಣ ಭೇದಿಸುವಲ್ಲಿ ಮತ್ತು ಆರೋಪಿಗಳನ್ನು ಪತ್ತೆ ಮಾಡುವ ಪ್ರಕ್ರಿಯೆಯಲ್ಲಿ ವಿಳಂಬವಾಗುತ್ತಿದೆ. ಆದರೂ ಕೂಡ ಪೊಲೀಸರು ಆರೋಪಿಯ ಪತ್ತೆಗೆ ವ್ಯಾಪಕ ಜಾಲ ಬೀಸಿದ್ದಾರೆ. ಶೀಘ್ರದಲ್ಲಿಯೇ ಅಪಹರಣಕ್ಕೊಳಗಾದ ನವಜಾತ ಶಿಶುವನ್ನು ಪತ್ತೆ ಮಾಡಲಾಗುವುದೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಂದೀಪ ಪಾಟೀಲ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಕಳೆದ ಒಂದು ತಿಂಗಳಿನಿಂದ ಪತ್ರಕರ್ತರಿಗೆ ಮಾಹಿತಿ ನೀಡಲು ನಿರಾಕರಿಸುತ್ತಿದ್ದ ಜಿಲ್ಲಾಸ್ಪತ್ರೆ ಸಿಬ್ಬಂದಿ ಈಗ ಪೊಲೀಸರಿಗೂ ಮಾಹಿತಿ ನೀಡದೇ ಪ್ರಕರಣವನ್ನು ಮುಚ್ಚಿ ಹಾಕುವ ಪ್ರಯತ್ನ ಮಾಡುತ್ತಿದೆ. ಮಗುವಿನ ಅಪಹರಣಕ್ಕೆ ಕಾರಣವಾದ ಭದ್ರತಾ ಸಿಬ್ಬಂದಿಯ ಮೇಲೆ ಜಿಲ್ಲಾಸ್ಪತ್ರೆಯ ಅಧಿಕಾರಿಗಳು ಇನ್ನೂವರೆಗೆ ಯಾವುದೇ ರೀತಿಯ ಕ್ರಮ ಕೈಗೊಂಡಿಲ್ಲ. ಆಸ್ಪತ್ರೆಯ ಭದ್ರತಾ ವ್ಯವಸ್ಥೆಯನ್ನು ಖಾಸಗಿ ಕಂಪನಿಯೊಂದಕ್ಕೆ ಗುತ್ತಿಗೆ ನೀಡಲಾಗಿದೆ. ಇವರ ಗುತ್ತಿಗೆಯನ್ನು ರದ್ದುಪಡಿಸಿ ಬೇರೆಯವರಿಗೆ ಭದ್ರತೆಯ ವ್ಯವಸ್ಥೆಯ ಜವಾಬ್ದಾರಿ ನೀಡಬೇಕೆನ್ನುವುದು ನಗರ ನಿವಾಸಿಗಳ ಬೇಡಿಕೆಯಾಗಿದೆ.

loading...

LEAVE A REPLY

Please enter your comment!
Please enter your name here