ಅಲೆಮಾರಿ ಜನಾಂಗದವರ ಗಮನಕ್ಕೆ

0
26

ಬೆಳಗಾವಿ 8: ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮವು 2012-13 ನೇ ಸಾಲಿಗೆ ಅಲೆಮಾರಿ/ಅರೆ ಅಲೆಮಾರಿ ಜನಾಂಗದ ಭೂ ರಹಿತ ಕೃಷಿ ಕಾರ್ಮಿಕರಿಗೆ ವ್ಯವಸಾಯ ಮಾಡಲು 2 ಎಕರೆ ಖುಷ್ಕಿ ಅಥವಾ 1 ಎಕರೆ ತರಿ ಜಮೀನು ಖರೀದಿಸಲು ಸಹಾಯಧನ ಮತ್ತು ಸಾಲ ಮೊತ್ತವನ್ನು ರೂ. 2.50 ಲಕ್ಷ ರೂ.ದಿಂದ 5 ಲಕ್ಷ ರೂ.ಗಳವರೆಗೆ ಹೆಚ್ಚಿಸಿ ಸರ್ಕಾರ ಆದೇಶ ಹೊರಡಿಸಲಾಗಿರುತ್ತದೆ. ಈ ಯೋಜನೆಯಡಿಯಲ್ಲಿ ಸೌಲ ಭ್ಯ ಪಡೆಯಬಯಸುವ ಅರ್ಹ ಫಲಾಪೇಕ್ಷಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿದಾರರು ಅಲೆಮಾರಿ/ ಅರೆ ಅಲೆಮಾರಿ ಜನಾಂಗಕ್ಕೆ ಸೇರಿದವರಾಗಿರಬೇಕು. ಅವರ ಕುಟುಂಬದ ವಾರ್ಷಿಕ ವರಮಾನವು ಎಲ್ಲ ಮೂಲಗಳಿಂದ 22,000/- ಗಳನ್ನು ಮೀರಿರಬಾರದು. ಗ್ರಾಮೀಣ ಪ್ರದೇಶದಲ್ಲಿ ವಾಸಿಸುತ್ತಿರಬೇಕು. ಕೃಷಿ ಜಮೀನು ಮಾತ್ರ ಖರೀದಿಸಬೇಕು. ಅರ್ಜಿಗಳನ್ನು ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದ ನಿಯಮಿತ, ಎಸ್.ಜೆ.ಎಸ್.ವೈ. ಮಾರಾಟ ಮಳಿಗೆಗಳ ಕಟ್ಟಡ 2ನೇ ಮಹಡಿ, ಎ.ಪಿ.ಎಮ್.ಸಿ. ರಸ್ತೆ ನೆಹರು ನಗರ ಬೆಳಗಾವಿ ಇವರಿಂದ ಪಡೆದು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಡಿಸೆಂಬರ್ 31 ರೊಳಗೆ ಅರ್ಜಿ ಸಲ್ಲಿಸಿ ಸ್ವೀಕೃತಿ ಪಡೆಯಬೇಕೆಂದು ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

loading...

LEAVE A REPLY

Please enter your comment!
Please enter your name here