ಶ್ರೇಷ್ಠ ಸಂಶೋಧನಾ ಪ್ರಾತ್ಯಕ್ಷಿಕೆಗಳಿಗೆ ಪ್ರಶಸ್ತಿ

0
62

ಬೆಳಗಾವಿ 8: ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಅಂಗ ಸಂಸ್ಥೆಯಾದ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ಶಿಸಾಮಾಜಿಕ ಪರಿವರ್ತನೆಗಾಗಿ ವಿಜ್ಞಾನ ಮತ್ತು ತಂತ್ರಜ್ಞಾನಷಿ ಕೇಂದ್ರ ವಿಷಯದಡಿ ಐದನೇ ಸಮ್ಮೇಳನವನ್ನು ಬರುವ ಡಿಸೆಂಬರ್ 13 ಹಾಗೂ 14 ರಂದು ಬೆಂಗಳೂರನ ಡಾ|| ಡಿ. ಪ್ರೇಮಚಂದ್ರ ಸಾಗರ್ ಅಡಿಟೋರಿಯಂ ಮತ್ತು ಸೆಂಟರ್ ಫಾರ್ ಪರ್ಫಾರ್ಮಿಂಗ್ ಆರ್ಟ್ಸ್, ದಯಾನಂದ ಸಾಗರ್ ವಿದ್ಯಾಸಂಸ್ಥೆ, ಶಾವಿಗೆ ಮಲ್ಲೇಶ್ವರ ಭಟ್ಟ, ಕುಮಾರಸ್ವಾಮಿ ಬಡಾವಣೆ ಬೆಂಗಳೂರು ಇಲ್ಲಿ ಆಯೋಜಿಸಲಾಗಿದೆ.

ಈ ಸಮ್ಮೇಳನದಲ್ಲಿ ರಾಜ್ಯದ ವಿವಿಧ ವಿಶ್ವವಿದ್ಯಾನಿಲಯ ಮತ್ತು ಶಿಕ್ಷಣ ಸಂಸ್ಥೆಗಳ ಸಂಶೋಧಕರು ಮತ್ತು ಸಂಶೋಧನಾ ವಿದ್ಯಾರ್ಥಿಗಳಿಂದ ವೈಜ್ಞಾನಿಕ ಸಂಶೋಧನೆಗೆ ಸಂಬಂಧಿಸಿದ ಪ್ರಾತ್ಯಕ್ಷಿಕೆಗಳನ್ನು ಮಂಡಿಸಲು ಆಹ್ವಾನಿಸಲಾಗಿದೆ. ಪ್ರಾತ್ಯಕ್ಷಿಕೆಯ ಸಾರಾಂಶವನ್ನು ಇ-ಮೇಲ್ ಮೂಲಕ ಕಳುಹಿಸಲು ನವೆಂಬರ್ 23 ಕೊನೆಯ ದಿನವಾಗಿದೆ. ಶ್ರೇಷ್ಠ ಪ್ರಾತ್ಯಕ್ಷಿಕೆಗಳಿಗೆ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರವನ್ನು ನೀಡಲಾಗುತ್ತದೆ. ಸಮ್ಮೇಳನದ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಅಕಾಡೆಮಿಯ ವೆಬ್ಸೈಟ್ ತಿತಿತಿ.ಣಚಿಛಿಚಿಜಜಟಥಿ.ಠರ/ಛಿಠಜಿಜಡಿಜಟಿಛಿಜ.ಣಟ ದಿಂದ ಪಡೆಯಬೇಕೆಂದು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

loading...

LEAVE A REPLY

Please enter your comment!
Please enter your name here